ಜೋಡಿ ಕೊಲೆ ಬಗ್ಗೆ ಮಾಹಿತಿ ನೀಡಿದರೆ ಲಕ್ಷ ರು. ಬಹುಮಾನ
ಬೆಂಗಳೂರು : ಪಂಚಗಟ್ಟಿ ದಂಪತಿ ಹಾಗೂ ತಾಯಿ -ಮಗನ ಜೋಡಿ ಕೊಲೆ ಪ್ರಕರಣಗಳ ಹಂತಕರಿಗೆ ಸಂಬಂಧಿಸಿದಂತೆ ಮಾಹಿತಿ ನೀಡುವವರಿಗೆ ಒಂದು ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ಸಾಂಗ್ಲಿಯಾನ ಘೋಷಿಸಿದ್ದಾರೆ.
ಗಿರಿನಗರ ಬಳಿ ಕಂಪ್ಯೂಟರ್ ಉದ್ಯಮಿಗಳಾದ ಜವಾಹರ್ ಪಂಚಗಟ್ಟಿ ಮತ್ತು ಅನು ಪಂಚಗಟ್ಟಿ ಅವರು ಕೊಲೆಯಾದ ಕೆಲವೇ ದಿನದಲ್ಲೇ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ತಾಯಿ ಹಾಗೂ ಮಗರ ಬರ್ಬರ ಹತ್ಯೆ ನಡೆದಿತ್ತು. ತಾಯಿ ಹಾಗೂ ಮಗನ ಕೊಲೆಯ ಹಿಂದೆ ದಂಡುಪಾಳ್ಯದ ಕೈವಾಡವಿದೆ ಎಂದು ಅವರು ಶಂಕಿಸಿದ್ದಾರೆ.
ದಂಡುಪಾಳ್ಯದ ಪಾತಕಿಗಳು ನಡೆಸುವ ಕೊಲೆ ಮಾದರಿಯಲ್ಲೇ ಮಲ್ಲಸಂದ್ರದಲ್ಲಿ ಗುರುವಾರ ರಾತ್ರಿ ತಾಯಿ-ಮಗನ ಹತ್ಯೆ ನಡೆದಿದೆ. ಇದರ ಬಗ್ಗೆ ಹಲವು ಸುಳಿವುಗಳೂ ಸಿಕ್ಕಿವೆ. ದಂಡುಪಾಳ್ಯದ ನಾಲ್ಕು ಮಂದಿ ಪ್ರಮುಖ ಆರೋಪಿಗಳು ಇನ್ನೂ ತಲೆ ಮರೆಸಿಕೊಂಡಿದ್ದಾರೆ ಎಂದು ಸಾಂಗ್ಲಿಯಾನ ತಿಳಿಸಿದ್ದಾರೆ.
ಆದರೆ, ಕಳೆದ ಸೋಮವಾರ ನಡೆದ ಪಂಚಗಟ್ಟಿ ಕೊಲೆ ಪ್ರಕರಣದ ಹಿಂದಿನ ನಿಗೂಢತೆ ತಿಳಿದುಬಂದಿಲ್ಲ. ಹೀಗಾಗಿ ಈ ಎರಡು ಪ್ರಕರಣಗಳ ಹಂತಕರ ಬಗ್ಗೆ ಯಾವುದೇ ಮಾಹಿತಿ ನೀಡುವವರಿಗೆ ಸೂಕ್ತ ರಕ್ಷಣೆ ನೀಡುವುದಲ್ಲದೆ, ಲಕ್ಷ ರುಪಾಯಿ ಬಹುಮಾನ ನೀಡಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಸಾಂಗ್ಲಿಯಾನ ಘೋಷಿಸಿದ್ದಾರೆ. ಈ ಕೊಲೆಗಳ ಬಗ್ಗೆ ತನಿಖೆ ನಡೆಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಸಾಂಗ್ಲಿಯಾನ ವಾಚ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications