ಹೋಬಳಿಗೊಂದು ಕೆರೆ ನವೀಕರಣ ಯೋಜನೆಗೆ ನ.30ರಿಂದ ಚಾಲನೆ
ಬೆಂಗಳೂರು : ಮಹತ್ವಾಕಾಂಕ್ಷೆಯ ಜಲವಸತಿ ನಿರ್ವಹಣಾ ಯೋಜನೆಗಾಗಿ ಕರ್ನಾಟಕ ಸರ್ಕಾರ ಕೇಳಿರುವ 996 ಕೋಟಿ ರುಪಾಯಿ ಸಾಲವನ್ನು ವಿಶ್ವ ಬ್ಯಾಂಕ್ ಮಂಜೂರು ಮಾಡುವ ನಿರೀಕ್ಷೆಯಿದೆ. ಮುಂದಿನ ವರ್ಷ -ಫೆಬ್ರವರಿ- ಮಾರ್ಚ್ ಹೊತ್ತಿಗೆ ಸಾಲದ ಹಣ ಬಿಡುಗಡೆಯಾಗಬಹುದು ಎಂದು ರಾಜ್ಯ ಜಲ ಸಂಪನ್ಮೂಲ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತಾಡುತ್ತಿದ್ದರು. ‘ರೈತರ ಕಾಯಕ, ರೈತರ ಕೆರೆ’ ಎಂಬ ಹೊಸ ಯೋಜನೆಯನ್ನು ಸರ್ಕಾರ ಪ್ರಾರಂಭಿಸಲಿದ್ದು, ರಾಜ್ಯದ 745 ಹೋಬಳಿಗಳ ಕನಿಷ್ಠ ತಲಾ ಒಂದು ಕೆರೆಗೆ ಹೊಸ ರೂಪು ಕೊಡಲಾಗುವುದು. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸಾವಲಂಗ ಹೊಸಕೆರೆ ನವೀಕರಣ ಕಾಮಗಾರಿ ಶುರು ಮಾಡುವುದರ ಮೂಲಕ ನವೆಂಬರ್ 30ರಂದು ಯೋಜನೆಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಯೋಜನೆಗೆ ಚಾಲನೆ ನೀಡುವರು ಎಂದರು.
ಹೂಳೆತ್ತಿ, ಕೆರೆಗಳನ್ನು ಆಧುನೀಕರಣಗೊಳಿಸುವ ಈ ಯೋಜನೆ ಪೂರ್ಣವಾಗಲು ಇನ್ನು ಒಂದು ವರ್ಷ ಬೇಕಾಗುತ್ತದೆ. ಹೊಸ ಕೆರೆಗಳ ನಿರ್ಮಾಣಕ್ಕೆ ನಬಾರ್ಡ್ 120 ಕೋಟಿ ರುಪಾಯಿಯನ್ನು ಬಿಡುಗಡೆ ಮಾಡಿದೆ ಎಂದು ಪ್ರಶ್ನೆಯಾಂದಕ್ಕೆ ಕುಮಾರ್ ಬಂಗಾರಪ್ಪ ಉತ್ತರ ಕೊಟ್ಟರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications