ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಜನವರಿ 31, 2002ರ ಗಡುವು
ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 15 ಸಾವಿರ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ರಾಜ್ಯ ಸರ್ಕಾರ ಜನವರಿ 31, 2002ರ ಗಡುವು ನೀಡಿದೆ.
ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕರ್ನಾಟಕ ರಾಜ್ಯ ಲೋಕ ಸೇವಾ ನಿಯಮಾವಳಿಗಳಿಗೆ ಕಳೆದ ನವೆಂಬರ್ 21ರಂದು ತಿದ್ದುಪಡಿ ತರಲಾಗಿದೆ. ತಿದ್ದುಪಡಿ ಅನ್ವಯ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮೀಸಲಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಕರ್ನಾಟಕ ಲೋಕ ಸೇವಾ ಆಯೋಗ ಮತ್ತಿತರ ಇಲಾಖೆಗಳ ಮುಖ್ಯಸ್ಥರಿಗೆ ಹೇಳಲಾಗಿದೆ. ಜನವರಿ 31, 2002 ಇದಕ್ಕೆ ಗಡುವು ಎಂದರು.
ಎ ಮತ್ತು ಬಿ ವರ್ಗದ ಹುದ್ದೆಗಳನ್ನು ರಾಜ್ಯ ಲೋಕ ಸೇವಾ ಆಯೋಗ ಭರ್ತಿ ಮಾಡಲಿದ್ದು, ಸಿ ಮತ್ತು ಡಿ ವರ್ಗದ ಅಗತ್ಯವಿರುವ ಸಿಬ್ಬಂದಿಯನ್ನು ಆಯಾ ಇಲಾಖೆಯ ಮುಖ್ಯಸ್ಥರು ನೇಮಿಸಿಕೊಳ್ಳಲಿದ್ದಾರೆ. ಇದು ನೇರ ನೇಮಕಾತಿ. ತಿದ್ದುಪಡಿಯನ್ವಯ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಗರಿಷ್ಠ 40 ವರ್ಷ ವಯಸ್ಸಿನವರಿಗೆ ಕೆಲಸ ದೊರೆಯಲಿದೆ. ಈ ಮುನ್ನ ಗರಿಷ್ಠ ವಯೋಮಿತಿ 38 ವರ್ಷಗಳಾಗಿತ್ತು. 29ರಿಂದ 40 ವರ್ಷ ವಯಸ್ಸಿನವರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಿದ್ದೇವೆ ಎಂದು ಸಚಿವರು ಹೇಳಿದರು.
ಈಗ ಕೊಟ್ಟಿರುವ ಗಡುವಿನೊಳಗೆ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮಾಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಕಾಗೋಡು ಎಚ್ಚರಿಕೆ ಕೊಟ್ಟರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications