ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಣ್ಣು ಮಕ್ಕಳಿಗೆ ವೃತ್ತಿಪರ ಶಿಕ್ಷಣವೂ ಉಚಿತ : ಸರ್ಕಾರದ ಇಂಗಿತ

By Staff
|
Google Oneindia Kannada News

ಬೆಂಗಳೂರು : ಹೆಣ್ಣು ಮಕ್ಕಳಿಗೆ ಕೊಡುತ್ತಿರುವ ಉಚಿತ ಶಿಕ್ಷಣವನ್ನು ವೃತ್ತಿಪರ ತರಗತಿಗಳಿಗೂ ವಿಸ್ತರಿಸುವ ಬಗ್ಗೆ ಕರ್ನಾಟಕ ಸರ್ಕಾರ ಚಿಂತಿಸುತ್ತಿದೆ.

ಉನ್ನತ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ।ಜಿ.ಪರಮೇಶ್ವರ್‌ ಸುದ್ದಿಗಾರರಿಗೆ ಮಂಗಳವಾರ ಈ ವಿಷಯ ತಿಳಿಸಿದರು. ಮಹಿಳಾ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳುತ್ತಿದ್ದೇವೆ. ಈಗಾಗಲೇ ಪದವಿ ಮಟ್ಟದವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುತ್ತಿದ್ದೇವೆ. ಹೀಗಿದ್ದೂ ಒಟ್ಟಾರೆ ಪದವಿ ವಿದ್ಯಾರ್ಥಿಗಳಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಪ್ರತಿಶತ 25ರಷ್ಟು ಮಾತ್ರ ಎಂದರು.

ಹೀಗಾಗಿ ವೃತ್ತಿಪರ ಶಿಕ್ಷಣದಲ್ಲೂ ಹೆಣ್ಣು ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸುವ ಪ್ರಸ್ತಾವನೆಯ ಬಗ್ಗೆ ಇತ್ತೀಚೆಗೆ ನಡೆದ ಅಂತರ ವಿಶ್ವವಿದ್ಯಾಲಯ ಮಂಡಳಿ (ಐಯುಬಿ) ಸಭೆಯಲ್ಲಿ ಚರ್ಚಿಸಲಾಯಿತು. ವಿಶ್ವವಿದ್ಯಾಲಯಗಳೂ ಇದನ್ನು ಅನುಷ್ಠಾನಕ್ಕೆ ತರಲು ಒಪ್ಪಿಗೆ ಸೂಚಿಸಿವೆ. ಸಚಿವ ಸಂಪುಟಕ್ಕೆ ಸದ್ಯದಲ್ಲೇ ಪ್ರಸ್ತಾವನೆ ಸಲ್ಲಿಸಿ, ಅದರ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.

‘ಭಾರತೀಯ ಸಂವಿಧಾನ’ವನ್ನು ಪದವಿಯ ಎಲ್ಲಾ ಕೋರ್ಸುಗಳಲ್ಲೂ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ. ಘಟಿಕೋತ್ಸವಕ್ಕೆ ಕಾಯದೆ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಕೊಡುವಂತೆ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚಿಸಲಾಗಿದೆ. ಇನ್ನು ಮುಂದೆ ಎಲ್ಲಾ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಅವಧಿ ಏಕ ಪ್ರಕಾರವಾಗಿರುತ್ತದೆ. ಬರುವ ವರ್ಷದ ಜೂನ್‌ನಿಂದ ಈ ಏಕರೂಪತೆ ಜಾರಿಗೆ ಬರಲಿದೆ ಎಂದು ತಿಳಿಸಿದರು.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X