ಸೈಕಲ್ ವಿರೋಧಿ ಪ್ರಚಾರ ಪ್ರಿಯ ಸಾಂಗ್ಲಿಯಾನರನ್ನು ವರ್ಗಾಯಿಸಿ
ಬೆಂಗಳೂರು : ಮಹಾತ್ಮಗಾಂಧಿ ರಸ್ತೆಯಲ್ಲಿ ಸೈಕಲ್ ಸಂಚಾರಕ್ಕೆ ನಿಷೇಧ ಸೇರಿದಂತೆ ಹಲವಾರು ಅನಗತ್ಯ ಯೋಜನೆಗಳನ್ನು ಹಮ್ಮಿಕೊಂಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಚ್.ಟಿ. ಸಾಂಗ್ಲಿಯಾನ ಅವರನ್ನು ತಕ್ಷಣವೇ ವರ್ಗಾಯಿಸುವಂತೆ ಬಿಜೆಪಿ ನಗರ ಯುವ ಮೋರ್ಚಾ ಘಟಕ, ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಒತ್ತಾಯಿಸಿದೆ.
ಪ್ರಚಾರಕ್ಕಾಗಿ ಪ್ರತಿ ದಿನವೂ ಒಂದು ಅಗ್ಗದ ತಂತ್ರವನ್ನು ಸಾಂಗ್ಲಿಯಾನ ಸೃಷ್ಟಿಸುತ್ತಿದ್ದಾರೆ. ನಗರದ ಜನತೆಯ ವಿಶ್ವಾಸಕ್ಕೆ ಸಾಂಗ್ಲಿಯಾನ ಅವರ ಆಡಳಿತ ವೈಖರಿ ಕೊಡಲಿ ಪೆಟ್ಟು ನೀಡಿದೆ ಎಂದು ಬಿಜೆಪಿ ನಗರ ಯುವಮೋರ್ಚಾ ಅಧ್ಯಕ್ಷ ಎಸ್. ಪ್ರಕಾಶ್ ಟೀಕಿಸಿದ್ದಾರೆ.
ನಗರ ಕಾನೂನು ಸುವ್ಯವಸ್ಥೆಯು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು , ಇದನ್ನು ಸಮರ್ಥವಾಗಿ ನಿಭಾಯಿಸಲು ಸಮರ್ಥ ಅಧಿಕಾರಿಯನ್ನು ಸರ್ಕಾರ ತಕ್ಷಣವೇ ನೇಮಕ ಮಾಡಬೇಕು. ಸಾಂಗ್ಲಿಯಾನ ಅಧಿಕಾರ ಸ್ವೀಕರಿಸಿ ತಿಂಗಳು ತುಂಬುವ ಮುನ್ನವೇ ಹಿರಿಯ ನಾಗರೀಕರೊಬ್ಬರ ಹತ್ಯೆ ಸೇರಿದಂತೆ 2 ಜೋಡಿ ಕೊಲೆಗಳು ನಡೆದಿವೆ ಎಂದು ಪ್ರಕಾಶ್ ಆರೋಪಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಸಾಂಗ್ಲಿಯಾನ ವಾಚ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications