ಕೊಬ್ಬರಿ ಬೆಳೆಗಾರರ ನೆರವಿಗೆ ರಾಜ್ಯ ಸರ್ಕಾರ: 10 ಕೋಟಿ ಬಿಡುಗಡೆ
ಬೆಂಗಳೂರು: ಬೆಲೆ ಕುಸಿತದಿಂದ ತತ್ತರಿಸಿರುವ ಕೊಬ್ಬರಿ ಬೆಳೆಗಾರರ ನೆರವಿಗೆ ಬಂದಿರುವ ರಾಜ್ಯ ಸರಕಾರ, ಮಾರುಕಟ್ಟೆ ಪುನಶ್ಚೇತನ ಯೋಜನೆಯಡಿ ಹೆಚ್ಚುವರಿಯಾಗಿ 10 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಈ ವಿಷಯವನ್ನು ರಾಜ್ಯ ಕೃಷಿ ಸಚಿವ ಟಿ.ಬಿ. ಜಯಚಂದ್ರ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಕೊಬ್ಬರಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರಿಗೆ ಸ್ಥೈರ್ಯ ತುಂಬಲು ರಾಜ್ಯ ಸರಕಾರ ಈವರೆಗೆ 19.8 ಕೋಟಿ ರುಪಾಯಿ ಮೌಲ್ಯದ ಒಟ್ಟು 34,050 ಕ್ವಿಂಟಾಲ್ ಕೊಬ್ಬರಿಯನ್ನು ಖರೀದಿಸಿದೆ. ಸರಕಾರ ಒಂದು ಕ್ವಿಂಟಾಲ್ ಕೊಬ್ಬರಿಗೆ 3,550 ರುಪಾಯಿಗಳ ಬೆಂಬಲ ಬೆಲೆ ಘೋಷಿಸಿದೆ ಎಂದೂ ಅವರು ಹೇಳಿದರು.
ಮೆಕ್ಕೆಜೋಳ ಬೆಳೆಗಾರರ ನೆರವಿಗೆ ಬರಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಬೆಳೆ ಮಾರುಕಟ್ಟೆಗೆ ಬಂದ ಕೂಡಲೇ ಸರಕಾರ ಮಾರುಕಟ್ಟೆಗೆ ಮಧ್ಯ ಪ್ರವೇಶಿಸುವುದು ಎಂದೂ ಅವರು ಭರವಸೆ ನೀಡಿದರು. ಸ್ಥಳೀಯ ಬೆಳೆಗಾರರ ಹಿತರಕ್ಷಣೆಯ ದೃಷ್ಟಿಯಿಂದ ಮೆಕ್ಕೆ ಜೋಳದ ಆಮದಿನ ಮೇಲೆ ಆಮದು ಸುಂಕ ಹೆಚ್ಚಿಸುವಂತೆ ರಾಜ್ಯ ಸರಕಾರವು ಕೇಂದ್ರವನ್ನು ಒತ್ತಾಯಿಸುತ್ತಲೇ ಇದೆ ಎಂದು ಜಯಚಂದ್ರ ತಿಳಿಸಿದರು.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications