ಬಿಜಾಪುರದಲ್ಲಿ ತೋಟಗಾರಿಕಾ ಬೆಳೆ ಸಂಶೋಧನಾ ಕೇಂದ್ರ
ಬೆಂಗಳೂರು: ಬಿಜಾಪುರದಲ್ಲಿ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರ ಆರಂಭಿಸಲು ರಾಜ್ಯ ಸರಕಾರ ಒಪ್ಪಿಗೆ ನೀಡಿದೆ.
ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ರಾಜ್ಯ ಕೃಷಿ ಸಚಿವ ಟಿ.ಬಿ. ಜಯಚಂದ್ರ ಗುರುವಾರ ತಿಳಿಸಿದರು. ತೋಟಗಾರಿಕೆ ಬೆಳೆಗಾರರಿಗೆ ನೆರವಾಗುವ ದೃಷ್ಠಿಯಿಂದ ಸರಕಾರ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಒಪ್ಪಿಗೆ ನೀಡಿದೆ. ಧಾರವಾಡ ಕೃಷಿ ವಿಶ್ವ ವಿದ್ಯಾಲಯ ನೀಡಿರುವ 5.17 ಕೋಟಿ ರೂಪಾಯಿ ವೆಚ್ಚದ ಯೋಜನಾ ವರದಿಯ ಅನ್ವಯ ಈ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಸರಕಾರ ಅನುಮತಿ ನೀಡಿದೆ ಎಂದು ಸಚಿವರು ಹೇಳಿದರು.
ಈ ಸಂಶೋಧನಾ ಕೇಂದ್ರದ ಜವಾಬ್ದಾರಿಯನ್ನು ಕೃಷಿ ವಿಶ್ವವಿದ್ಯಾಲಯ ವಹಿಸಿಕೊಳ್ಳಲಿದೆ. ಬಾಗಲಕೋಟೆ, ಬಿಜಾಪುರ ಜಿಲ್ಲೆಗಳಲ್ಲಿ ತೋಟಗಾರಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಈ ಕೇಂದ್ರವನ್ನು ಬಿಜಾಪುರದಲ್ಲಿ ತೆರೆಯಲು ಉದ್ದೇಶಿಸಲಾಗಿದೆ. ಅಲ್ಲದೆ ಎರಡೂ ಜಿಲ್ಲೆಗಳ ತೋಟಗಾರಿಕಾ ಉತ್ಪನ್ನಗಳು ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯನ್ನು ಎದುರಿಸಬಲ್ಲ ಗುಣಮಟ್ಟ ಹೊಂದಿವೆ ಎಂದ ಸಚಿವರು ಇದಕ್ಕಾಗಿ ಈಗಾಗಲೇ 1.14 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದರು.
(ಇನ್ಫೋ ವಾರ್ತೆ)ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications