ದೇವನಹಳ್ಳಿ ವಿಮಾನ ನಿಲ್ದಾಣ 2004ರ ಹೊತ್ತಿಗೆ ರಾಷ್ಟ್ರಕ್ಕೆ ಅರ್ಪಣೆ
ಬೆಂಗಳೂರು : ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ನಿರ್ಮಿಸಲುದ್ದೇಶಿಸಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು 2004ರ ಅಂತ್ಯ ಅಥವಾ 2005ರ ಆರಂಭದಲ್ಲೇ ರಾಷ್ಟ್ರಕ್ಕೆ ಅರ್ಪಿಸುವುದಾಗಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಬೆಂಗಳೂರಿನ ಎಚ್.ಎ.ಎಲ್. ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಏರ್ಪಡಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗಿರುವ ಬಗ್ಗೆ ವಿಷಾದ ಬೇಡ. ನಿಗದಿತ ಸಮಯದೊಳಗೇ ವಿಮಾನ ನಿಲ್ದಾಣವನ್ನು ರಾಷ್ಟ್ರಕ್ಕೆ ಅರ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದರು.
ಬಿಹಾರಿ ಲಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಸಕ್ಕರೆ ಸಚಿವ ಎ. ಕೃಷ್ಣಪ್ಪ, ಹಿಂದೂಸ್ತಾನ್ ವಿಮಾನ ಕಾರ್ಖಾನೆಯ ಅಧ್ಯಕ್ಷ ಎನ್.ಆರ್. ಮೊಹಂತಿ, ನಟ ಸುದೀಪ್, ನಟಿ ಶ್ರುತಿ, ಸಾಹಿತಿ ದೊಡ್ಡರಂಗೇಗೌಡ ಮೊದಲಾದವರು ಪಾಲ್ಗೊಂಡಿದ್ದರು.
(ಇನ್‌ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ












Click it and Unblock the Notifications