Get Updates
Get notified of breaking news, exclusive insights, and must-see stories!

ದಾವಣಗೆರೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಿಗೆ ರಾಷ್ಟ್ರ ಪ್ರಶಸ್ತಿ

ದಾವಣಗೆರೆ : ಇಲ್ಲಿನ ಭಾರತೀಯ ತಾಂತ್ರಿಕ ಸಂಸ್ಥೆ ಪ್ರತಿವರ್ಷ ನೀಡುವ ಭಾರತ ವಿದ್ಯಾಭವನ ರಾಷ್ಟ್ರೀಯ ಪ್ರಶಸ್ತಿಗೆ ಪ್ರೊ. ವೈ. ವೃಷಭೇಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ.

ಇಂಜಿನಿಯರಿಂಗ್‌ ಕಾಲೇಜಿನ ಅತ್ಯುತ್ತಮ ಪ್ರಾಂಶುಪಾಲರಿಗೆ ಮೀಸಲಾಗಿರುವ ರಾಷ್ಟ್ರಮಟ್ಟದ ಈ ಪ್ರಶಸ್ತಿ , ರಾಜ್ಯದ ಪ್ರಾಂಶುಪಾಲರೊಬ್ಬರಿಗೆ ದೊರೆಯುತ್ತಿರುವುದು ಇದೇ ಮೊದಲು. ದಾವಣಗೆರೆ ಬಾಪೂಜಿ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲರಾಗಿರುವ ಪ್ರೊ. ವೈ. ವೃಷಭೇಂದ್ರಪ್ಪ ಅವರ ಸೇವೆಯನ್ನು ಗುರ್ತಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇಂಜಿನಿಯರಿಂಗ್‌ ಕಾಲೇಜಿನಲ್ಲಿನ ಸುಧಾರಣೆ ಹಾಗೂ ವಿದ್ಯಾಭ್ಯಾಸಕ್ಕೆ ಪ್ರಾಂಶುಪಾಲರು ನೀಡುತ್ತಿರುವ ಪ್ರೋತ್ಸಾಹವನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+