ಚಿತ್ರಮಂದಿರಗಳಲ್ಲಿ ಧೂಮಪಾನ ಮಾಡಿದ 29 ಮಂದಿ ಬಂಧನ
ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಕೂಡದೆಂದು ಸುಪ್ರಿಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸರು 29 ಮಂದಿಯನ್ನು ಬಂಧಿಸಿದ್ದಾರೆ. ಈ 29 ಮಂದಿ ಕೆಂಪೇಗೌಡ ರಸ್ತೆಯ ಸಿನಿಮಾ ಮಂದಿರಗಳಲ್ಲಿ ಸಿಗರೇಟು ಸೇದುತ್ತಿದ್ದರು.
ಸಂತೋಷ್, ನರ್ತಕಿ, ಕಲ್ಪನ ಮತ್ತು ಮೆಜೆಸ್ಟಿಕ್ ಚಿತ್ರಮಂದಿರಗಳಿಗೆ ಇತ್ತೀಚೆಗೆ ಇದ್ದಕ್ಕಿದ್ದಂತೆ ದಾಳಿಯಿಟ್ಟ ಪೊಲೀಸರು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಧೂಮಪಾನ ಮಾಡುತ್ತಿದ್ದವರನ್ನು ಬಂಧಿಸಿದ್ದಾರೆ. ನಂತರ ತಲಾ 25 ರುಪಾಯಿ ದಂಡ ವಸೂಲು ಮಾಡಿ ಬಿಡುಗಡೆ ಮಾಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರನ್ನು ಬಂಧಿಸುವಂತೆ ಮುಖ್ಯ ನಗರಗಳ ಎಲ್ಲಾ ಪೊಲೀಸ್ ಆಯುಕ್ತರಿಗೆ ಸುಪ್ರಿಂಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉಪ್ಪಾರ ಪೇಟೆ ಪೊಲೀಸರು ತಿಳಿಸಿದ್ದಾರೆ. ನಗರದಲ್ಲಿ ಸಿಗರೇಟು- ಬೀಡಿ ಸೇದಿರುವ ಕಾರಣಕ್ಕೆ ಬಂಧಿನದ ಕ್ರಮ ಕೈಗೊಂಡಿರುವುದು ಇದೇ ಮೊದಲು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications