ಐರ್ಲೆಂಡಿನ ಜಾನ್‌ ಹ್ಯುಮ್‌ಗೆ ಪ್ರತಿಷ್ಠಿತ ಗಾಂಧಿ ಶಾಂತಿ ಪ್ರಶಸ್ತಿ

ನವದೆಹಲಿ : ಐರ್ಲೆಂಡಿನ ನಾಗರಿಕ ಹಕ್ಕುಗಳ ನಾಯಕ ಜಾನ್‌ ಹ್ಯುಮ್‌ ಈ ವರ್ಷದ ಅಂತರರಾಷ್ಟ್ರೀಯ ಗಾಂಧಿ ಶಾಂತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಗಾಂಧಿ ತತ್ವಗಳು ಹಾಗೂ ಅಹಿಂಸೆಯನ್ನು ಹರಡುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದನ್ನು ಗುರುತಿಸಿ ಈ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ವಿಷಯವನ್ನು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಗಮೋಹನ್‌ ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಪ್ರಶಸ್ತಿಗಾಗಿ ಜಾನ್‌ ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ಒಂದು ಕೋಟಿ ರೂಪಾಯಿ ನಗದು ಮತ್ತು ಫಲಕವನ್ನೊಳಗೊಂಡಿರುತ್ತದೆ. ಜಾನ್‌ ಹ್ಯುಮ್‌ ಅವರ ಅನುಕೂಲ ದಿನವನ್ನು ನೋಡಿಕೊಂಡು ರಾಷ್ಟ್ರಪತಿ ಕೆ.ಆರ್‌. ನಾರಾಯಣನ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಗಾಂಧಿ ಪ್ರಶಸ್ತಿಗಾಗಿ ಹ್ಯುಮ್‌ ಆಯ್ಕೆಯಾಗಿರುವ ವಿಷಯವನ್ನು ಈಗಾಗಲೇ ಅವರಿಗೆ ತಿಳಿಸಲಾಗಿದ್ದು, ಪ್ರಶಸ್ತಿ ಸ್ವೀಕಾರ ಮಾಡಲು ಅವರು ಒಪ್ಪಿಕೊಂಡಿರುವುದಾಗಿ ಜಗಮೋಹನ್‌ ಹೇಳಿದರು.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+