ವಿದ್ಯುತ್ ಸಮಸ್ಯೆ ಶಾಶ್ವತ ಪರಿಹಾರಕ್ಕೆ ವಿಶಿಷ್ಟ ಯೋಜನೆ
ಬೆಂಗಳೂರು : ರಾಜ್ಯದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಲು ವಿಶಿಷ್ಟ ಯೋಜನೆಯನ್ನು ಹಮ್ಮಿಕೊಂಡಿರುವುದಾಗಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ಗುರುವಾರ ಈ ವಿಷಯ ತಿಳಿಸಿದರು. ಇಂಧನ ಸಚಿವ ವೀರಕುಮಾರ್ ಪಾಟೀಲ್ ಸದ್ಯದಲ್ಲೇ ಯೋಜನೆಯ ರೂಪುರೇಷೆಗಳನ್ನು ಪ್ರಕಟಿಸಲಿದ್ದಾರೆ. ವಿದ್ಯುತ್ ಜಾಲದ ಗುಣಮಟ್ಟ ಹೆಚ್ಚಿಸುವುದು ನಮ್ಮ ಮುಂದಿನ ಸವಾಲು. ಇದನ್ನು ಎದುರಿಸಲು ಸರ್ಕಾರ ಸಜ್ಜಾಗಿದೆ. ವಿಶಿಷ್ಟ ಯೋಜನೆಯಲ್ಲಿ ಜಾಲದ ಗುಣಮಟ್ಟಕ್ಕೇ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ












Click it and Unblock the Notifications