‘1037 ಕೋಟಿ ರುಪಾಯಿ ವೆಚ್ಚದಲ್ಲಿ ರಾಜ್ಯದ ರಸ್ತೆಗಳ ಅಭಿವೃದ್ಧಿ’
ಗುಲ್ಬರ್ಗಾ: ರಾಜ್ಯದ ರಸ್ತೆಗಳ ಅಭಿವೃದ್ಧಿಯ ಮೊದಲ ಹಂತದ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ರಸ್ತೆ ಅಭಿವೃದ್ಧಿಗೆ ವಿಶ್ವಬ್ಯಾಂಕ್ ನೆರವು ನೀಡಿದ್ದು, 1037 ಕೋಟಿ ರುಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ಧರ್ಮಸಿಂಗ್ ಹೇಳಿದ್ದಾರೆ.
ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಸ್ತೆ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮಕೈಗೊಳ್ಳಲಾಗುವುದು. ತ್ವರಿತಗತಿಯ ಕಾಮಗಾರಿಗೆ ದೂರವಾಣಿ, ವಿದ್ಯುತ್ ಕೇಬಲ್ಗಳು ಅಡ್ಡಿಯುಂಟು ಮಾಡುತ್ತಿದ್ದು, ಇವುಗಳನ್ನು ಸ್ಥಳಾಂತರಿಸಲು ಸೂಚಿಸಲಾಗಿದೆ. ಈ ಕಾರ್ಯಕ್ಕಾಗಿ ಸಂಬಂಧಿಸಿದ ಇಲಾಖೆಗಳಿಗೆ ಪಾವತಿಸಲು 30 ಕೋಟಿ ರುಪಾಯಿಗಳನ್ನು ಮೀಸಲಿಡಲಾಗಿದೆ ಎಂದೂ ಅವರು ಹೇಳಿದರು.
140 ಕೋಟಿ ರುಪಾಯಿ ವೆಚ್ಚದಲ್ಲಿ ಬೀದರ್ - ಹತ್ತಿಗುಡೂರು ನಡುವಿನ 189 ಕಿ.ಮೀ ರಸ್ತೆ, 72 ಕೋಟಿ ರುಪಾಯಿ ವೆಚ್ಚದಲ್ಲಿ ಸಿಂಧನೂರು - ಗುಡಗುಂಟ ಮಧ್ಯದ 78 ಕಿ.ಮೀ. ರಸ್ತೆ, 67 ಕೋಟಿ ರುಪಾಯಿ ವೆಚ್ಚದಲ್ಲಿ 76 ಕಿ.ಮೀಟರ್ಗಳ ಕಲ್ಮಲಾ- ಸಿಂಧನೂರು ನಡುವಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಸ್ಪರ್ಧಾತ್ಮಕ ಬಿಡ್ ಅನ್ನು ಸಹ ಅಂತಿಮಗೊಳಿಸಲಾಗಿದೆ ಎಂದರು.
ಇದಲ್ಲದೆ 244 ಕೋಟಿ ರುಪಾಯಿ ವೆಚ್ಚದಲ್ಲಿ 9 ಸೇತುವೆಗಳ ನಿರ್ಮಾಣಕ್ಕೆ ಬಿಡ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಎಲ್ಲ ಕಾಮಗಾರಿಗಳನ್ನೂ ಕಾಲಬದ್ಧ ಯೋಜನೆಯಡಿ ನಿಗದಿತ ಸಮಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಧರ್ಮಸಿಂಗ್ ವಿವರಿಸಿದರು.
ಕುಡಿಯುವ ನೀರು : 215 ಕೋಟಿ ರುಪಾಯಿಗಳ ವೆಚ್ಚದಲ್ಲಿ ರಾಜೀವಗಾಂಧೀ ಪ್ರಾದೇಶಿಕ ನೀರು ಪೂರೈಕೆ ಯೋಜನೆಯಡಿ ಜೇವರ್ಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಂಗ್ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications