ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಜಿನಿಯರ್‌ಗಳಿಗಾಗಿ ಮೈಸೂರಿನಲ್ಲಿ ಐಎಎಸ್‌ ತರಬೇತಿ ಕೇಂದ್ರ

By Staff
|
Google Oneindia Kannada News

ಮೈಸೂರು : ಎಂಜಿನಿಯರಿಂಗ್‌ ಪದವೀಧರರಿಗೆ ಕೂಡ ಐ.ಎ.ಎಸ್‌ ಮತ್ತು ಐ.ಎಫ್‌.ಎಸ್‌.ಪರೀಕ್ಷೆ ಎದುರಿಸಲು ನೆರವಾಗುವ ನಿಟ್ಟಿನಲ್ಲಿ ಮೈಸೂರು ನಗರದಲ್ಲಿ ಪ್ರಾದೇಶಿಕ ಐ.ಎ.ಎಸ್‌. ತರಬೇತಿ ಕೇಂದ್ರ ಸ್ಥಾಪಿಸಿಲಾಗುವುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. ಉಪಕುಲಪತಿ ಡಾ. ಕೆ. ಬಲವೀರ ರೆಡ್ಡಿ ತಿಳಿಸಿದ್ದಾರೆ.

‘ಎಂಜಿನಿಯರ್‌ಗಳು ಮತ್ತು ಹೈಟೆಕ್‌ ಆಡಳಿತಗಾರರು’ ಎಂಬ ವಿಷಯದ ಬಗ್ಗೆ ಭಾನುವಾರ ಇಲ್ಲಿನ ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ ಸಭಾಂಗಣದಲ್ಲಿ ನಡೆದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಇತ್ತೀಚಿನ ದಿನಗಳಲ್ಲಿ ಎಂಜಿನಿಯರಿಂಗ್‌ ಪದವೀಧರರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಯಶಸ್ವಿಯಾಗುತ್ತಿದ್ದಾರೆ ಎಂದರು.

ಈ ಹಿನ್ನೆಲೆಯಲ್ಲಿ ಆಸಕ್ತ ಎಂಜಿನಿಯರಿಂಗ್‌ ಪದವೀಧರರನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಲು ನಿರ್ಧರಿಸಲಾಗಿದೆ. ಮೈಸೂರಿನಲ್ಲಿ ಪ್ರಾದೇಶಿಕ ತರಬೇತಿ ಕೇಂದ್ರ ಸ್ಥಾಪಿಸಲು ಈಗಾಗಲೇ ಜೆ.ಎಸ್‌.ಎಸ್‌. ಶಿಕ್ಷಣ ಸಂಸ್ಥೆಯಾಡನೆ ಮಾತುಕತೆ ನಡೆಸಲಾಗಿದೆ. ಸೂಕ್ತ ಸ್ಥಳ ದೊರೆತ ಕೂಡಲೇ ಕೇಂದ್ರದ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು ಎಂದು ಡಾ. ರೆಡ್ಡಿ ತಿಳಿಸಿದರು.

2001ನೇ ಸಾಲಿನಲ್ಲೇ ಕೇಂದ್ರ ಕಾರ್ಯಾರಂಭ ಮಾಡಲಿದೆ ಎಂದೂ ಬಲವೀರ ರೆಡ್ಡಿ ತಿಳಿಸಿದರು. ವಿಚಾರ ಸಂಕಿರಣದಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನಿರ್ದೇಶಕ ಬಿ.ಜಿ. ರುದ್ರಪ್ಪ, ಸಿಎಫ್‌ಟಿಆರ್‌ಐ ನಿರ್ದೇಶಕ ಪ್ರಕಾಶ್‌ ಮೊದಲಾದವರು ಪಾಲ್ಗೊಂಡಿದ್ದರು.

(ಮೈಸೂರು ಪ್ರತಿನಿಧಿಯಿಂದ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X