ದಿನ ಬಿಟ್ಟು ದಿನ ಗ್ರಾಮೀಣ ಪ್ರದೇಶಗಳಲ್ಲಿ ಸತತ 12 ತಾಸು ವಿದ್ಯುತ್
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ದಿನ ಬಿಟ್ಟು ದಿನ ನಿರಂತರ 12 ಗಂಟೆಗಳ ಕಾಲ ಮೂರು ಫೇಸ್‌ನಲ್ಲಿ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು , ಈ ಯೋಜಿತ ವ್ಯವಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಂಗಳವಾರ(ಡಿ.11) ದಿಂದ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ.
ಪ್ರಸ್ತುತ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿನಿತ್ಯ 6 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುತ್ತಿದ್ದು , ಇದರೊಂದಿಗೆ ದಿನ ಬಿಟ್ಟು ದಿನ ನಿರಂತರ 12 ತಾಸುಗಳ ಕಾಲ ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ವಿದ್ಯುತ್ ಖಾತೆ ಸಚಿವ ವೀರಕುಮಾರ್ ಪಾಟೀಲ್ ಸೋಮವಾರ ತಿಳಿಸಿದ್ದಾರೆ.
12 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಈಗಾಗಲೇ ಅಥಣಿ ತಾಲ್ಲೂಕಿನಲ್ಲಿ ಪರಿಚಯಿಸಲಾಗಿದ್ದು , ಅಲ್ಲಿನ ರೈತರ ಮೆಚ್ಚುಗೆಗೆ ಪಾತ್ರವಾಗಿದೆ. ಈ ವ್ಯವಸ್ಥೆಯನ್ನು ಇತರ ಜಿಲ್ಲೆಗಳಿಗೆ ವಿಸ್ತರಿಸುವ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನ ಫಲಿತಾಂಶವನ್ನು ಗಮನಿಸಲಾಗುವುದು. ಆನಂತರ ರಾಜ್ಯದ ಇತರ ಜಿಲ್ಲೆಗಳಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೀರಕುಮಾರ್ ಪಾಟೀಲ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications