ಸಂಗೀತ ವಿದ್ಯಾಸಾಗರ ಕೇಶವಮೂರ್ತಿಗೆ ಪಂಚಾಕ್ಷರಿ ಪ್ರಶಸ್ತಿ
ಬೆಂಗಳೂರು : ಪ್ರಸಕ್ತ ಸಾಲಿನ ಗಾನಯೋಗಿ ಪಂಚಾಕ್ಷರಿ ಗವಾಯಿ ಪ್ರಶಸ್ತಿಗೆ ಸಂಗೀತ ವಿದ್ಯಾಸಾಗರ ಆರ್.ಆರ್. ಕೇಶವಮೂರ್ತಿ ಆಯ್ಕೆಯಾಗಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ವಿದ್ವಾಂಸರಿಗೆ ಗಾನಯೋಗಿ ಪಂಚಾಕ್ಷರಿ ಪ್ರತಿಷ್ಠಾನ ಈ ಪ್ರಶಸ್ತಿಯನ್ನು ನೀಡುತ್ತದೆ.
ಡಿಸೆಂಬರ್ 29 ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಗಾಯನ ಸಮಾಜದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ . ಡಾ। ಪುಟ್ಟರಾಜ ಗವಾಯಿ ಪ್ರಶಸ್ತಿ ವಿತರಿಸುವರು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. 50 ಸಾವಿರ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications