ವಿಡಿಯೋ ಕಾನ್ಫರೆನ್ಸ್ ಜಾಲಕ್ಕೆ ದಕ್ಷಿಣ ಭಾರತ ಪೊಲೀಸ್ ಮುಖ್ಯಸ್ಥರು
ಬೆಂಗಳೂರು : ಅಂತರರಾಜ್ಯ ಅಪರಾಧಗಳು ಹಾಗೂ ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಉದ್ದೇಶದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನೇರ ಸಂಪರ್ಕ ಸಾಧಿಸಲು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್ ಮುಖ್ಯಸ್ಥರು ತೀರ್ಮಾನಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ವಿ.ವಿ. ಭಾಸ್ಕರ್ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಮುಂದೆಯೂ ಇಂಥ ಸಭೆಗಳನ್ನು ನಿಯಮಿತವಾಗಿ ನಡೆಸಲು ಸಭೆ ನಿರ್ಧರಿಸಿತು.
ಅಂತರರಾಜ್ಯ ಅಪರಾಧಗಳು, ಉಗ್ರಗಾಮಿ ಚಟುವಟಿಕೆಗಳು ಹಾಗೂ ಬೇಹುಗಾರಿಕೆ ಬಗೆಗಿನ ಮಾಹಿತಿಗಳನ್ನು ಪರಸ್ಪರ ಕಾಲ ವಿಳಂಬವಿಲ್ಲದೆ ವಿನಿಮಯ ಮಾಡಿಕೊಳ್ಳಲು ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಅಗತ್ಯವಾಗಿದ್ದು , ಈ ವ್ಯವಸ್ಥೆಯನ್ನು ಜಾರಿಗೊಳಿಸಲು ಪೊಲೀಸ್ ಮಹಾ ನಿರ್ದೇಶಕರ ಸಭೆ ತೀರ್ಮಾನಿಸಿತು. ತಮಿಳುನಾಡು, ಕೇರಳದ ಪೊಲೀಸ್ ಮಹಾನಿರ್ದೇಶಕರು ಹಾಗೂ ಆಂಧ್ರಪ್ರದೇಶ, ಪಾಂಡಿಚೆರಿ, ಮಧ್ಯ ಪ್ರದೇಶ ಮತ್ತು ಚತ್ತೀಸಗಢ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications