ಬೆಳಗಾವಿ, ನಿಪ್ಪಾಣಿ ಮತ್ತು ಕಾರವಾರ ಮಹಾರಾಷ್ಟ್ರಕ್ಕೆ ಸೇರಿದ್ದಾ ?

ನಾಗಾಪುರ : ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹರಿಸಲು ಮಹಾರಾಷ್ಟ್ರದ ಮುಖ್ಯಮಂತ್ರಿ ವಿಲಾಸ್‌ರಾವ್‌ ದೇಶ್‌ಮುಖ್‌ ಉತ್ಸುಕರಾಗಿದ್ದು, ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದರಲ್ಲಿ ರಾಜ್ಯದ ಎಲ್ಲ ಪಕ್ಷಗಳ ನಡುವೆ ಒಮ್ಮತವಿದೆ ಎಂದು ಹೇಳಿದ್ದಾರೆ.

ಗಡಿ ಸಮಸ್ಯೆಯ ಇತ್ಯರ್ಥಕ್ಕೆ ಯೋಜನೆಯಾಂದನ್ನು ರೂಪಿಸಿ ಅದರ ನೇತೃತ್ವ ವಹಿಸುವಂತೆ ಹಿರಿಯ ಬಿಜೆಪಿ ನಾಯಕ ಗೋಪಿನಾಥ ಮುಂಡೆ ಅವರಿಗೆ ದೇಶ್‌ಮುಖ್‌ ಸೂಚಿಸಿದ್ದಾರೆ. ಮಂಗಳವಾರ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ನಾರಾಯಣ ರಾಣೆ ಮಂಡಿಸಿದ ಸೂಚನಾ ಗೊತ್ತುವಳಿ ಮೇಲಿನ ಚರ್ಚೆಯಲ್ಲಿ ದೇಶ್‌ಮುಖ್‌ ಮಾತನಾಡುತ್ತಿದ್ದರು.

ಕರ್ನಾಟಕದ ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಅವರೊಡನೆ ಗಡಿ ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿ ಹಲವು ಬಾರಿ ಮಾತುಕತೆ ನಡೆಸಲಾಗಿದೆ. ಈ ವಿಷಯದ ಬಗ್ಗೆ ಅವರು ರಚನಾತ್ಮಕ ನಿಲುವು ತಳೆದಿದ್ದಾರೆ. ಆದರೆ ಅವರ ಮೇಲೆ ಸಾಕಷ್ಟು ರಾಜಕೀಯ ಒತ್ತಡಗಳಿವೆ ಎಂದು ದೇಶ್‌ಮುಖ್‌ ಹೇಳಿದರು.

(ಇನ್ಫೋ ವಾರ್ತೆ)

ನೀವೇನು ಹೇಳುತ್ತೀರಿ ?

ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+