ಡಿ. 15ರಂದು ಉಡುಪಿ ಮಠದಲ್ಲಿ ಶೃಂಗೇರಿ ಜಗದ್ಗುರುಗಳಿಗೆ ಸನ್ಮಾನ
ಉಡುಪಿ: ಶೃಂಗೇರಿ ಶ್ರೀ ಶಾರದಾಂಬಾ ಪೀಠದ ಜಗದ್ಗುರು ಶಂಕರಾಚಾರ್ಯ ಸಂಸ್ಥಾನದ ಭಾರತೀ ತೀರ್ಥ ಮಹಾಸ್ವಾಮಿಗಳನ್ನು ಡಿಸೆಂಬರ್ 15ರಂದು ಉಡುಪಿ ರಾಜಾಂಗಣದಲ್ಲಿ ಸನ್ಮಾನಿಸಲು ನಿರ್ಧರಿಸಲಾಗಿದೆ.
ಶನಿವಾರ ಸಂಜೆ ನಡೆಯುವ ಈ ಕಾರ್ಯಕ್ರಮದಲ್ಲಿ ಉಡುಪಿ ಮಠದ ವತಿಯಿಂದ ಸನ್ಮಾನ ನಡೆಯಲಿದ್ದು, ಪರ್ಯಾಯ ಪೀಠದ ವಿಶ್ವೇಶ ತೀರ್ಥ ಸ್ವಾಮೀಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶೃಂಗೇರಿಯಿಂದ ಆಗಮಿಸುವ ಜಗದ್ಗುರುಗಳನ್ನು ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಗುವುದು. ನಂತರ ರಾಜಾಂಗಣದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಶ್ರೀಗಳ ಸನ್ಮಾನ ಕಾರ್ಯಕ್ರಮ ನಡೆಯುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.
ಮೆರವಣಿಗೆಯಲ್ಲಿ ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಕೆ. ಪೈ ಹಾಗೂ ಮಠದ ದಿವಾನ ರಘುರಾಮ ಆಚಾರ್ಯರು ಭಾಗವಹಿಸಲಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications