Get Updates
Get notified of breaking news, exclusive insights, and must-see stories!

ಸಂಶೋಧಕ ಚಿದಾನಂದಮೂರ್ತಿ ಅವರಿಗೆ ಶಂಬಾ ಜೋಷಿ ಪ್ರಶಸ್ತಿ

ಶಿವಮೊಗ್ಗ : ಹಿರಿಯ ಸಂಶೋಧಕ ಡಾ.ಚಿದಾನಂದ ಮೂರ್ತಿ ಅವರಿಗೆ ಈ ಸಾಲಿನ ಡಾ. ಶಂಬಾಜೋಷಿ ಪ್ರಶಸ್ತಿ ಲಭ್ಯವಾಗಿದೆ. ಶಿವಮೊಗ್ಗದ ಕರ್ನಾಟಕ ಸಂಘ ಪ್ರತಿವರ್ಷ ನೀಡುವ ಈ ಪ್ರಶಸ್ತಿಯು ಎರಡು ಸಾವಿರ ರುಪಾಯಿ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಡಿಸೆಂಬರ್‌ 16ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಇದೇ ಸಂದರ್ಭದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಎಂ.ಎ. ಪದವಿಯಲ್ಲಿ ಪ್ರಥಮ ರ್ಯಾಂಕ್‌ ಪಡೆದ ವಿದ್ಯಾರ್ಥಿಗೆ ರಾಷ್ಟ್ರಕವಿ ಕುವೆಂಪು ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದೂ ಪ್ರಕಟಣೆ ತಿಳಿಸಿದೆ.

ಇದಲ್ಲದೆ ಪ್ರಥಮ ಮತ್ತು ದ್ವಿತೀಯ ವರ್ಷದ ಕನ್ನಡ ಎಂ.ಎ.ಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಇಬ್ಬರಿಗೆ ಎಸ್‌.ವಿ. ಪರಮೇಶ್ವರಭಟ್ಟ ಪುರಸ್ಕಾರ ನೀಡಲಾಗುತ್ತದೆ. ಸಮಾರಂಭದಲ್ಲಿ ಜಯದೇವಪ್ಪ ಜೈನಕೇರಿ ಅವರ ಪ್ರವಾಸ ಕಥನ ‘ಸಂಜನ ದರುಶನ’ ಕೃತಿಯ ಬಿಡುಗಡೆ ಕಾರ್ಯಕ್ರಮವೂ ನಡೆಯಲಿದೆ.

(ಇನ್‌ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+