ಬಿಗಿ ಪೊಲೀಸ್ ಭದ್ರತೆ! ಸಾಫ್ಟ್ವೇರ್ ಕಂಪನಿಗಳಿಗೆ ಇರುಸುಮುರುಸು
ಬೆಂಗಳೂರು : ನಗರದಲ್ಲಿನ ಭಾರತೀಯ ಬಾಹ್ಯಾಕಾಶ ಸಂಸ್ಥೆ ಹಾಗೂ ಸಾಫ್ಟ್ವೇರ್ ಸಂಸ್ಥೆಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ವಿ.ವಿ.ಭಾಸ್ಕರ್ ತಿಳಿಸಿದ್ದಾರೆ.
ಡಿಸೆಂಬರ್ 13 ರ ಗುರುವಾರ ದೆಹಲಿಯಲ್ಲಿನ ಸಂಸತ್ ಭವನದ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ವೈಟ್ಫೀಲ್ಡ್ನಲ್ಲಿನ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್, ರಾಜ್ಯದ ಜಲಾಶಯಗಳು, ಕಾರವಾರದ ಕೈಗಾ ಅಣು ವಿದ್ಯುತ್ ಸ್ಥಾವರ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಯೋಜನೆಗಳು, ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಿಗೆ ಹೆಚ್ಚಿನ ಪೊಲೀಸ್ ರಕ್ಷಣೆ ಒದಗಿಸಲಾಗಿದೆ ಎಂದು ಭಾಸ್ಕರ್ ಹೇಳಿದರು.
ಬೆಂಗಳೂರಿನಲ್ಲಿನ ಎಲ್ಲ ಸಾಫ್ಟ್ವೇರ್ ಕಂಪನಿಗಳು ಹಾಗೂ ಅವುಗಳ ಸಿಇಓಗಳಿಗೆ ರಕ್ಷಣೆ ಒದಗಿಸಲಾಗಿದೆ. ಪೊಲೀಸ್ ರಕ್ಷಣೆ ಕೆಲವು ಸಾಫ್ಟ್ವೇರ್ ಕಂಪನಿಗಳಿಗೆ ಇರುಸುಮುರುಸು ತಂದಿದ್ದರೂ, ಸದ್ಯದ ಪರಿಸ್ಥಿತಿಯಲ್ಲಿ ಮುನ್ನೆಚ್ಚರಿಕೆ ಅನಿವಾರ್ಯವಾಗಿದೆ. ರಾಜ್ಯಪಾಲೆ ವಿ.ಎಸ್.ರಮಾದೇವಿ, ಮುಖ್ಯಮಂತ್ರಿ ಎಸ್.ಎಂ. ಕೃಷ್ಣ , ವಿರೋಧ ಪಕ್ಷಗಳು ಮುಖಂಡರು ಸೇರಿದಂತೆ ಎಲ್ಲ ವಿವಿಐಪಿಗಳಿಗೂ ಹೆಚ್ಚಿನ ರಕ್ಷಣೆ ಒದಗಿಸಲಾಗಿದೆ.
ಪೊಲೀಸರಿಗೆ ನೀಡಿದ್ದ ಎಲ್ಲ ರಜೆಗಳನ್ನು ರದ್ದು ಪಡಿಸಲಾಗಿದ್ದು , ರಜೆಯಲ್ಲಿರುವ ಪೊಲೀಸರಿಗೂ ಕರ್ತವ್ಯಕ್ಕೆ ಮರಳುವಂತೆ ಸೂಚಿಸಲಾಗಿದೆ ಎಂದು ಭಾಸ್ಕರ್ ತಿಳಿಸಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications