ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 18ರಂದು ಉದ್ಘಾಟನೆ
ಉಡುಪಿ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಾಧೀಶರಾದ ನ್ಯಾಯಮೂರ್ತಿ ಎನ್.ಕೆ. ಜೈನ್ ಅವರು ಡಿಸೆಂಬರ್ 18ರ ಮಂಗಳವಾರ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವನ್ನು ಉದ್ಘಾಟಿಸಲಿದ್ದಾರೆ.
ಈ ವಿಷಯವನ್ನು ಉಡುಪಿ ಜಿಲ್ಲಾ ಬಾರ್ ಅಸೋಸಿಯೆಷನ್‌ನ ಅಧ್ಯಕ್ಷ ವೈ. ಸಿ. ಎಸ್. ಹೆಗಡೆ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ತಿಳಿಸಿದರು. ಉಡುಪಿ ಜಿಲ್ಲೆಯ ಬಾರ್ ಅಸೋಸಿಯೇಷನ್ ಬಹಳ ಕಾಲದಿಂದಲೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಬೇಡಿಕೆ ಮುಂದಿಟ್ಟಿತ್ತು ಎಂದು ಅವರು ಹೇಳಿದರು.
ತಮ್ಮ ಬಹುದಿನಗಳ ಬೇಡಿಕೆ ಈಡೇರಿಸಿದ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಈ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ವಹಿಸುವರು ಎಂದು ತಿಳಿಸಿದರು.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications