ಹುಬ್ಬಳ್ಳಿ-ಧಾರವಾಡಕ್ಕೆ ಕುಡಿಯುವ ನೀರು ಕೊಡಲು ಶೆಟ್ಟರ್ ಆಗ್ರಹ
ಹುಬ್ಬಳ್ಳಿ: ರಾಜ್ಯ ಸರ್ಕಾರದ ಬೇಜವಾಬ್ದಾರಿ ವರ್ತನೆಯಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ಕುಡಿಯುವ ನೀರಿನ ಕೊರತೆಯಿಂದ ಬಳಲುತ್ತಿವೆ ಎಂದು ವಿಧಾನಸಭೆಯ ವಿರೋಧ ಪಕ್ಷಗಳ ಮುಖಂಡ ಬಿಜೆಪಿಯ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸರ್ಕಾರವನ್ನು ಟೀಕಿಸಿದ್ದಾರೆ.
ಅವಳಿ ನಗರಗಳ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸದಿದ್ದಲ್ಲಿ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಶನಿವಾರ ಪಿಟಿಐ ಪ್ರತಿನಿಧಿಯಾಂದಿಗೆ ಮಾತನಾಡುತ್ತಿದ್ದ ಜಗದೀಶ್ ಶೆಟ್ಟರ್ ಎಚ್ಚರಿಸಿದರು.
ಮಲಪ್ರಭ ನದಿಯಿಂದ ನೀರು ಸರಬರಾಜು ಮಾಡುವ ನೀರಿನ ಕೊಳವೆಗಳನ್ನು ಬದಲಾಯಿಸುವ 5 ಕೋಟಿ ರುಪಾಯಿ ಯೋಜನೆ ಪೂರೈಸುವುದಾಗಿ ಸರ್ಕಾರ ಭರವಸೆ ನೀಡಿತ್ತು . 44 ಕೋಟಿ ರುಪಾಯಿಗಳಲ್ಲಿ ಈ ಯೋಜನೆ ಪೂರೈಸುವ ಭ್ರಮೆ ಹುಟ್ಟಿಸಿದ್ದ ಸರ್ಕಾರ ಈಗ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದೆ ಎಂದು ಶೆಟ್ಟರ್ ಆರೋಪಿಸಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications