ಸೋಮವಾರ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಸಂಪುಟ ವಿಸ್ತರಣೆ

ೆಂಗಳೂರು : ಸುಮಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಕೃಷ್ಣ ದೃಢ ನಿರ್ಧಾರ ಮಾಡಿದ್ದು , ಡಿಸೆಂಬರ್‌ 17 ರ ಸೋಮವಾರ ಮಧ್ಯಾಹ್ನ 12.30 ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಜಭವನದಲ್ಲಿ ನಡೆಯಲಿದೆ. ಈ ಕುರಿತು ಹೊರರಾಜ್ಯ ಪ್ರವಾಸದಲ್ಲಿದ್ದ ರಾಜ್ಯಪಾಲೆ ವಿ.ಎಸ್‌.ರಮಾದೇವಿ ಅವರಿಗೆ ಸಂದೇಶ ರವಾನಿಸಲಾಗಿದೆ. ಅವರು ಭಾನುವಾರ ನಗರಕ್ಕೆ ವಾಪಸ್ಸಾಗಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಉನ್ನತ ಮೂಲಗಳನ್ನು ಉಲ್ಲೇಖಿಸಿ ಈಟೀವಿ ವರದಿ ಮಾಡಿದೆ.

ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ವೀರಶೈವ ಹಾಗೂ ಕ್ರೆೃಸ್ತ ಮತದವರಿಗೆ ಪ್ರಾತಿನಿಧ್ಯ ನೀಡಲು ಹಾಗೂ ಜಿಲ್ಲಾ ಪ್ರಾತಿನಿಧ್ಯಕ್ಕೆ ಒತ್ತು ನೀಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕಳೆದ ವಾರವಷ್ಟೇ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಶಾಸಕರನ್ನು ಮುಖ್ಯಮಂತ್ರಿ ಕೃಷ್ಣ ಪ್ರಕಟಿಸಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಕೃಷ್ಣಗಾರುಡಿಯ ಕನ್ನಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+