ಶೀಘ್ರವೇ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆ: ಅಲ್ಲಂ
ಬೆಂಗಳೂರು : ಟಿ.ಜಾನ್ ಮರುಸೇರ್ಪಡೆಯೂ ಸೇರಿದಂತೆ ಮೂವರು ಹೊಸ ಸಚಿವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಶೀಘ್ರವೇ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ವಿಷಯವನ್ನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಲ್ಲ ವೀರಭದ್ರಪ್ಪ ತಿಳಿಸಿದ್ದಾರೆ.
ಸೋಮವಾರ ಮುಖ್ಯಮಂತ್ರಿಗಳು ಮೊದಲ ಹಂತದ ಸಂಪುಟ ವಿಸ್ತರಣೆ ಮಾಡಿದ್ದಾರೆ, ಎರಡನೇ ಸುತ್ತಿನ ಸಂಪುಟ ವಿಸ್ತರಣೆ ಸದ್ಯದಲ್ಲೇ ನೆರವೇರಲಿದೆ ಎಂದು ಅಲ್ಲಂ ವೀರಭದ್ರಪ್ಪ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಉಡುಪಿ, ಚಾಮರಾಜನಗರ, ಹಾವೇರಿ ಮತ್ತು ಬೀದರ್ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡುವ ಸಲುವಾಗಿ ಎರಡನೇ ಸುತ್ತಿನ ಸಂಪುಟ ವಿಸ್ತರಣೆ ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.
ಸಂಪುಟ ವಿಸ್ತರಣೆಯ ವಿಚಾರ ಬಂದಾಗ, ಜಿಲ್ಲಾ ಪ್ರಾತಿನಿಧ್ಯ, ವರ್ಗ ಪ್ರಾತಿನಿಧ್ಯದ ಪ್ರಶ್ನೆ ಉದ್ಭವಿಸುತ್ತದೆ. ಮುಂದಿನ ವಿಸ್ತರಣೆಯಲ್ಲಿ ಎಲ್ಲ ವರ್ಗದವರಿಗೂ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಮೂಲಕ ಸಂತೃಪ್ತಿಗೊಳಿಸಲಾಗುವುದು ಎಂದು ಅವರು ಹೇಳಿದರು.
(ಇನ್‌ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ












Click it and Unblock the Notifications