ಡಿ.22ರಿಂದ ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ
ಮೈಸೂರು : ಡಿಸೆಂಬರ್ 22ರಿಂದ ನಗರದಲ್ಲಿ ಎರಡು ದಿನಗಳ ಕಾಲ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಕರ್ನಾಟಕದ 250ಕ್ಕೂ ಹೆಚ್ಚು ಪಕ್ಷದ ಮುಖಂಡರು ಇದರಲ್ಲಿ ಭಾಗವಹಿಸಲಿದ್ದಾರೆ.
ಹದಿನಾಲ್ಕು ವರ್ಷಗಳ ನಂತರ ಮೈಸೂರಿನಲ್ಲಿ ಸಭೆ ಹಮ್ಮಿಕೊಳ್ಳಲಾಗುತ್ತಿದೆ. ಸಭೆಯಲ್ಲಿ ಕರ್ನಾಟಕದ ರೈತರ ಎಲ್ಲಾ ಸಮಸ್ಯೆಗಳು, ಭಯೋತ್ಪಾದನೆ ನಿಗ್ರಹ ಸುಗ್ರೀವಾಜ್ಞೆ (ಪೊಟೊ) ಬಗ್ಗೆ ಚರ್ಚಿಸಲಾಗುವುದು. ಗೃಹ ಸಚಿವ ಎಲ್.ಕೆ.ಅಡ್ವಾಣಿ ಮುಖ್ಯ ಆಹ್ವಾನಿತರಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ರಾಷ್ಟ್ರೀಯ ಸಮಿತಿ ಸದಸ್ಯ ತೋಂಟದಾರ್ಯ ಮತ್ತು ಬಿಜೆಪಿ ಶಾಸಕ ಎ.ರಾಮದಾಸ್ ಸುದ್ದಿಗಾರರಿಗೆ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications