ಚಳಿಗಾಲದ ಅಧಿವೇಶನದ ಬಳಿಕ ಹುಬ್ಬಳ್ಳಿಗೆ ಬರ್ತಾರೆ ವಾಜಪೇಯಿ

ಹುಬ್ಬಳ್ಳಿ : ಹುಬ್ಬಳ್ಳಿಗೆ ಸ್ಥಳಾಂತರಗೊಂಡಿರುವ ನೈಋತ್ಯ ರೈಲ್ವೆ ವಲಯದ ಕಚೇರಿಯನ್ನು ಉದ್ಘಾಟಿಸಲು ಪ್ರಧಾನ ಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಅವರು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಸಂಸತ್‌ ಅಧಿವೇಶನ ಮುಗಿದ ಬಳಿಕ ಅವರು ರಾಜ್ಯಕ್ಕೆ ಆಗಮಿಸುವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಸವರಾಜ ಸೇಡಂ ಹೇಳಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಈ ವಿಷಯ ತಿಳಿಸಿದರು. ನೈಋತ್ಯ ವಲಯ ಕಚೇರಿ ಉದ್ಘಾಟನೆ ದಿನಾಂಕವನ್ನು ಶೀಘ್ರವೇ ನಿಗದಿ ಪಡಿಸಲಾಗುವುದು ಎಂದು ಹೇಳಿದ ಅವರು, ಟಿ.ಜಾನ್‌ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವ ಮುಖ್ಯಮಂತ್ರಿ ಕೃಷ್ಣ ಅವರನ್ನು ಕಟುವಾಗಿ ಟೀಕಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ರಾಜಕೀಯ ಸಮತೋಲನ ಕಾಪಾಡಲು ಕೃಷ್ಣ ಅವರು ಶ್ರಮದಾಯಕ ಕಸರತ್ತು ನಡೆಸುತ್ತಿದ್ದಾರೆ. ತಾವೇ ಕಿತ್ತು ಹಾಕಿದ ಸಚಿವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ತಾವು ಹೈಕಮಾಂಡ್‌ನ ಕೈಗೊಂಬೆ ಎಂಬುದನ್ನು ಕೃಷ್ಣ ಸಾಬೀತು ಪಡಿಸಿಕೊಂಡಿದ್ದಾರೆ ಎಂದು ಸೇಡಂ ಟೀಕಿಸಿದರು.

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+