Get Updates
Get notified of breaking news, exclusive insights, and must-see stories!

ನೆಟ್‌ವರ್ಕ್‌ ಜಾಲದಡಿ ರಾಜ್ಯದ ಎಂಜಿನಿಯರಿಂಗ್‌ ಕಾಲೇಜುಗಳು

ಮಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು, ತನ್ನ ವ್ಯಾಪ್ತಿಯಲ್ಲಿ ಬರುವ ದೇಶದ ಎಲ್ಲ ಎಂಜಿನಿಯರಿಂಗ್‌ ಕಾಲೇಜುಗಳನ್ನೂ ನೆಟ್‌ವರ್ಕ್‌ನಡಿಯಲ್ಲಿ ತರಲು ಕಾರ್ಯಪ್ರವೃತ್ತವಾಗಿದೆ. ಈ ವಿಷಯವನ್ನು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ. ಬಲವೀರ ರೆಡ್ಡಿ ಮಾಧ್ಯಮ ಪ್ರತಿನಿಧಿಗಳಿಗೆ ಇಲ್ಲಿ ತಿಳಿಸಿದ್ದಾರೆ.

ಈ ಹೊತ್ತು ಉಪಗ್ರಹ ಮೂಲಕ ಶಿಕ್ಷಣವು ತಾಂತ್ರಿಕ ಶಿಕ್ಷಣದ ಒಂದು ಭಾಗವಾಗಿದ್ದು, ಎಲ್ಲ ಕಾಲೇಜುಗಳನ್ನೂ ಸಂಪರ್ಕ ಜಾಲದಡಿ ಬೆಸೆಯುವುದು ಅನಿವಾರ್ಯವಾಗಿದೆ. ಈ ಕಾರ್ಯ ಮುಂದಿನ ಎರಡು ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು.

ಈ ನೆಟ್‌ವರ್ಕಿಂಗ್‌ ಕಾರ್ಯವನ್ನು ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯ ರಿಮೋಟ್‌ ಸೆನ್ಸಿಂಗ್‌ ಅಪ್ಲೆಕೇಷನ್ಸ್‌ ಕೇಂದ್ರ ಕೈಗೆತ್ತಿಕೊಂಡಿದೆ. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಪರಿಣತರ ನಡುವೆ ಸಂಪರ್ಕ ಬೆಸೆದು, ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾಹಿತಿ ಲಭ್ಯವಾಗುವಂತೆ ಮಾಡಲಾಗುವುದು ಇದರ ಉದ್ದೇಶ ಎಂದು ಅವರು ಹೇಳಿದರು.

ನೆಟ್‌ವರ್ಕಿಂಗ್‌ನಿಂದಾಗಿ ವಿದ್ಯಾರ್ಥಿ ಹಾಗೂ ತಜ್ಞರ ನಡುವೆ ಪರಸ್ಪರ ವಿಚಾರ ವಿನಿಮಯಕ್ಕೂ ಅವಕಾಶ ದೊರೆಯಲಿದೆ. ಮೊದಲ ಹಂತದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾನ್ಯತೆಪಡೆದ 15 ಎಂಜಿನಿಯರಿಂಗ್‌ ಕಾಲೇಜುಗಳನ್ನು ಈ ಜಾಲದಡಿ ಸಂಪರ್ಕಿಸಲಾಗುವುದು ಎಂದು ರೆಡ್ಡಿ ಹೇಳಿದರು.

(ಪಿ.ಟಿ.ಐ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+