ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬತ್ತಿದ ಭೀಮಾ, ಬಿಜಾಪುರ ಜಿಲ್ಲೆ ಭಗೀರಥನ ಪಾತ್ರದಲ್ಲಿ ಸಾಸನೂರು!

By Staff
|
Google Oneindia Kannada News

ಬಿಜಾಪುರ : ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ನಾನೊಬ್ಬ ಜವಾಬ್ದಾರಿಯುತ ಸಚಿವನಾಗಿ ಕಾರ್ಯ ನಿರ್ವಹಿಸಬೇಕಾಗಿದೆ.

ಮೊನ್ನೆಯಷ್ಟೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಮಾರುಕಟ್ಟೆ ಸಚಿವ ಬಿ.ಎಸ್‌. ಪಾಟೀಲ್‌ ಸಾಸನೂರು ಅವರ ಕನಸು ಮನಸಿನ ತುಂಬ ನೀರಿನ ಸಮಸ್ಯೆ ತುಂಬಿಕೊಂಡಿದೆ. ಇಷ್ಟು ದಿನ ಶಾಸಕರಾಗಿದ್ದರು. ಈಗ ಸಚಿವರಾಗಿದ್ದಾರೆ. ಜವಾಬ್ದಾರಿಯೂ ಹೆಚ್ಚಿದೆ. ಜಿಲ್ಲೆಗೆ ಕುಡಿಯುವ ನೀರು ಒದಗಿಸುವಂತೆ ಸರ್ಕಾರದ ಗಮನ ಸೆಳೆಯುವುದೇ ನನ್ನ ಮೊದಲ ಆದ್ಯತೆ ಎಂದು ಸಚಿವ ಸಾಸನೂರು ಪ್ರಕಟಿಸಿಯೂ ಆಗಿದೆ.

ಭೀಮಾ ನದಿ ಬತ್ತಿರುವುದರಿಂದ ಬಿಜಾಪುರ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ. ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರದ ಜೊತೆಗೆ ಮತ್ತೆ ಮಾತುಕತೆ ನಡೆಸಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಸಚಿವ ಪಾಟೀಲ್‌ ಸಾಸನೂರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೂವಿನ ಹಿಪ್ಪರಗಿ ಕ್ಷೇತ್ರದಲ್ಲಿ ಜಲಾನಯನ ಪ್ರದೇಶಾಭಿವೃದ್ಧಿ ಕಾರ್ಯ ಯೋಜನೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಈ ಯೋಜನೆಯನ್ನು ಜಿಲ್ಲೆಯ ಇತರ ಭಾಗಗಳಿಗೂ ವಿಸ್ತರಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುವುದಾಗಿ ಸಾಸನೂರು ಹೇಳಿದರು.

(ಇನ್ಫೋ ವಾರ್ತೆ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X