ಉಡುಪಿ : ವ್ಯಕ್ತಿಯ ಬಂಧನ - 1.750 ಕೆಜಿ ಚಿನ್ನಾಭರಣ ವಶ
ಮಣಿಪಾಲ್ : ಚೆನ್ನೈ ಮೂಲದ ವ್ಯಕ್ತಿಯಾಬ್ಬನನ್ನು ಬಂಧಿಸಿರುವ ಉಡುಪಿ ಪೊಲೀಸರು, ಆತನಿಂದ 1.750 ಕಿ.ಗ್ರಾಂ. ಚಿನ್ನಾಭರಣಗಳು ಮತ್ತು ಚಿನ್ನದ ಹಾಳೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಚಿನ್ನಾಭರಣಗಳ ಒಟ್ಟು ಮೌಲ್ಯ ಸುಮಾರು 7.6 ಲಕ್ಷಗಳೆಂದು ಪೊಲೀಸರು ತಿಳಿಸಿದ್ದಾರೆ.
ಇದಲ್ಲದೆ ಬಂಧಿತ ವ್ಯಕ್ತಿಯಿಂದ 36,700 ರುಪಾಯಿ ನಗದನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯು ಯಾವುದೇ ಪರವಾನಗಿ ಇಲ್ಲದೆ, ಮುಂಬಯಿ ಮತ್ತು ಚೆನ್ನೈನಿಂದ ತಂದ ಸಿದ್ಧ ಆಭರಣಗಳನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಲೈಸೆನ್ಸ್ ಇಲ್ಲದೆ ಆಭರಣಗಳನ್ನು ಹೊರರಾಜ್ಯದಿಂದ ತಂದು ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಈ ವ್ಯಕ್ತಿಯ ವಿರುದ್ಧ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ ಎಂದೂ ಉಡುಪಿ ಪೊಲೀಸರು ತಿಳಿಸಿದ್ದಾರೆ.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications