ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ. 26ರಂದು ಹಿರೇಹಳ್ಳ ನೀರಾವರಿ ಯೋಜನೆ ರಾಷ್ಟ್ರಕ್ಕೆ ಸಮರ್ಪಣೆ

By Staff
|
Google Oneindia Kannada News

ಗಂಗಾವತಿ : ಕೊಪ್ಪಳ ಜಿಲ್ಲೆಯ 20 ಸಾವಿರ ಎಕರೆ ಭೂಮಿಗೆ ನೀರೊದಗಿಸುವ ಮಹತ್ವಾಕಾಂಕ್ಷೆಯ ಹಿರೇಹಳ್ಳ ನೀರಾವರಿ ಯೋಜನೆಯನ್ನು ರಾಜ್ಯದ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಡಿಸೆಂಬರ್‌ 26ರಂದು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

157 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ನೀರಾವರಿ ಯೋಜನೆಯು ಈ ಭಾಗದ ಜನರಿಗೆ ವರದಾನವಾಗಿದೆ. ಈ ವಿಷಯವನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಕಾಡಾ ಅಧ್ಯಕ್ಷ ಎಚ್‌.ಆರ್‌. ಶ್ರೀನಾಥ್‌ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಈ ಯೋಜನೆಯ ಉದ್ಘಾಟನೆಗಾಗಿ ಬೆಳಗ್ಗೆ 10.30ಕ್ಕೆ ಆಗಮಿಸುತ್ತಿದ್ದು, ಅವರನ್ನು ಅದ್ಧೂರಿಯಿಂದ ಸ್ವಾಗತಿಸಲು ಸಕಲ ಸಿದ್ಧತೆಗಳನ್ನೂ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತಿಭಟನೆ : ಈ ಮಧ್ಯೆ ಹಿರೇಹಳ್ಳ ನೀರಾವರಿ ಯೋಜನೆಯಿಂದ ಮುಳುಗಡೆಯಾಗಿರುವ ಭೂಮಿಯ ಮಾಲಿಕರು ಹಾಗೂ ರೈತರು ಪುನರ್ವಸತಿಗೆ ಒತ್ತಾಯಿಸಿ, ಡಿ.26ರಂದು ಮುಖ್ಯಮಂತ್ರಿಗಳೆದುರು ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.

(ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X