‘ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ 130 ಕೋಟಿ ರುಪಾಯಿ ಸಬ್ಸಿಡಿ’
ಹುಬ್ಬಳ್ಳಿ : ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗಾಗಿಯೇ ರಾಜ್ಯ ಸರಕಾರ 130 ಕೋಟಿ ರುಪಾಯಿಗಳ ಸಬ್ಸಿಡಿಯನ್ನು ಬಿಡುಗಡೆ ಮಾಡಲಿದೆ ಎಂದು ರಾಜ್ಯ ಸಣ್ಣ ಕೈಗಾರಿಕಾ ಸಚಿವ ಎಸ್. ಆರ್. ಕಾಶಪ್ಪನವರ್ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಹುಬ್ಬಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಸಚಿವರು, ಹೊಸ ಕೈಗಾರಿಕಾ ನೀತಿಯ ಅಡಿಯಲ್ಲಿ ತಂತ್ರಜ್ಞಾನದ ಮೇಲ್ದರ್ಜೆಗೇರಿಸುವುದು, ಮೂಲಭೂತ ಸೌಕರ್ಯ ಒದಗಿಸುವುದು, ಹಾಗೂ ಮಾನವ ಸಂಪನ್ಮೂಲದ ಅಭಿವೃದ್ಧಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಅಧ್ಯಯನ ನಡೆಸಲು ಅಧಿಕಾರಿಗಳ ಮಟ್ಟದ ಸಮಿತಿ ರಚಿಸಲಾಗಿದೆ. ಸಮಿತಿಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಾಗತಿಕರಣ ಹಾಗೂ ಡಬ್ಲ್ಯುಟಿಓದೊಂದಿಗೆ ಮಾಡಿಕೊಂಡಿರುವ ಒಪ್ಪಂದದಿಂದ ಸಣ್ಣ ಕೈಗಾರಿಕೆಗಳ ಮೇಲೆ ಉಂಟಾಗಿರುವ ಪರಿಣಾಮ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಹುಬ್ಬಳ್ಳಿಯಲ್ಲಿ ಶುಕ್ರವಾರ ಕಾರ್ಯಾಗಾರವೊಂದನ್ನು ಸಹ ಏರ್ಪಡಿಸಲಾಗಿತ್ತು.
(ಪಿ.ಟಿ.ಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications