‘ಹೈಕೋರ್ಟ್‌ ಪೀಠ ಸ್ಥಾಪನೆ ಬಗ್ಗೆ ಮುಖ್ಯ ನ್ಯಾಯಾಧೀಶರ ಒಲವು’

ಬೆಂಗಳೂರು: ಕರ್ನಾಟಕದಲ್ಲಿ ಹೈಕೋರ್ಟ್‌ ಪೀಠ ಸ್ಥಾಪಿಸುವ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂತಿ ನರೇಂದ್ರ ಕುಮಾರ್‌ ಜೈನ್‌ ಒಲವು ತೋರಿದ್ದಾರೆ. ಈ ವಿಷಯವನ್ನು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದ್ದಾರೆ.

ಶುಕ್ರವಾರ ತಮ್ಮನ್ನು ಭೇಟಿ ಮಾಡಿದ್ದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಸಚಿವರು, ಹೈಕೋರ್ಟ್‌ ಪೀಠ ಸ್ಥಾಪನೆ ಬಗ್ಗೆ ಮುಖ್ಯ ನ್ಯಾಯಾಧೀಶರು ಒಲವು ತೋರಿರುವುದು ಉತ್ತಮ ಹಾಗೂ ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಹೈಕೋರ್ಟ್‌ ಪೀಠವನ್ನು ಎಲ್ಲಿ ಸ್ಥಾಪಿಸಬೇಕು ಎನ್ನುವುದನ್ನು ಹೈಕೋರ್ಟ್‌ ನಿರ್ಧರಿಸುತ್ತದೆ. ಹೈಕೋರ್ಟ್‌ ಪೀಠವನ್ನು ಹುಬ್ಬಳ್ಳಿಯಲ್ಲಿ ಅಥವಾ ರಾಜ್ಯದ ಬೇರೆ ಯಾವುದೇ ಸ್ಥಳದಲ್ಲಿ ಸ್ಥಾಪಿಸುವ ಅಧಿಕಾರ ಕೋರ್ಟ್‌ಗಿದೆ. ಇದು ಸರಕಾರಕ್ಕೆ ಸಂಬಂಧಿಸಿದ ವಿಚಾರವಲ್ಲ ಎಂದು ಅವರು ಸ್ಪಷ್ಟಪಡಿಸಿದರು.

(ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+