ಹಾವೇರಿಯಲ್ಲಿ ಇನ್ನೊಬ್ಬ ರೈತನ ಆತ್ಮಹತ್ಯೆ : ಇದು 19ನೆಯದು !
ಹಾವೇರಿ : ಭೀಮಪ್ಪ ಬಸಪ್ಪ ಶಿವಬಸಕ್ಕನವರ್(62) ಎಂಬ ರೈತ ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದರ ಮೂಲಕ ಹಾವೇರಿ ಜಿಲ್ಲೆಯಲ್ಲಿ ಕಳೆದ ಮಾರ್ಚ್ ತಿಂಗಳಿಂದ ಈವರೆಗೆ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 19ಕ್ಕೆ ಏರಿದೆ. ಈ ಪೈಕಿ ಭೀಮಪ್ಪ ಬಸಪ್ಪ ಸೇರಿದಂತೆ ಹಾನಗಲ್ ತಾಲ್ಲೂಕಿನವರು 9.
ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿದ್ದ ಭೀಮಪ್ಪ ಬೆಳೆನಾಶ ಹಾಗೂ ಬೆಂಬಲ ಬೆಲೆ ಕುಸಿತದ ಕಾರಣ ಸಾಲ ತೀರಿಸಲಾಗದೆ ಹತಾಶನಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಹಾನಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ನೋಡಿ, ಶವಪರೀಕ್ಷೆಗೆ ಅಪ್ಪಣೆ ಕೊಡಿಸಬೇಕೆಂದು ತಹಸೀಲ್ದಾರರನ್ನು ಗ್ರಾಮಸ್ಥರು ಕೇಳಿಕೊಂಡರು. ಗ್ರಾಮಸ್ಥರ ಕರೆಗೆ ತಹಸೀಲ್ದಾರ್ ತಕ್ಷಣ ಸ್ಪಂದಿಸಲಿಲ್ಲ. ಈ ಕಾರಣ ಕ್ರುದ್ಧರಾದ ಗ್ರಾಮಸ್ಥರು ಅಡೂರ್ ಪೊಲೀಸ್ ಠಾಣೆಯನ್ನು ಘೕರಾವ್ ಮಾಡಿದರು. ತಾಲ್ಲೂಕು ಮ್ಯಾಜಿಸ್ಟ್ರೇಟ್ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಅಂದಹಾಗೆ, ಕರ್ನಾಟಕದಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಜಿಲ್ಲೆ ಹಾವೇರಿ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications