ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಆಸ್ಪತ್ರೆಗೆ ದಾಖಲು
ಬೆಂಗಳೂರು : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಸತತ ಬಿಕ್ಕಳಿಕೆಯಿಂದ ಬಳಲುತ್ತಿದ್ದು, ಅವರನ್ನು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಎರಡು ದಿನಗಳ ಹಿಂದಷ್ಟೇ ದೆಹಲಿಯಿಂದ ಬೆಂಗಳೂರಿಗೆ ಮರಳಿದ ಹೆಗಡೆ ಅವರಿಗೆ ಸತತ ಬಿಕ್ಕಳಿಕೆ ಬರಲು ಆರಂಭಿಸಿತು. ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಅವರ ಆಪ್ತ ವಲಯದವರು ತಿಳಿಸಿದ್ದಾರೆ.
ವೈದ್ಯರು ಹೆಗಡೆ ಅವರಿಗೆ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸಲಹೆ ಮಾಡಿದ್ದು, ರಾಮಕೃಷ್ಣ ಹೆಗಡೆ ಅವರು ಗುಣಮುಖರಾಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ವಿಷಯ ತಿಳಿದ ಸಂಯುಕ್ತ ಜನತಾದಳದ ಮುಖಂಡರು, ಕಾರ್ಯಕರ್ತರು ಆಸ್ಪತ್ರೆಗೆ ಧಾವಿಸಿ ಹೆಗಡೆ ಅವರ ಯೋಗಕ್ಷೇಮ ವಿಚಾರಿಸಿದರು.
(ಇನ್‌ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications