ವೀರೇಂದ್ರ ಹೆಗ್ಗಡೆ, ನಾಗೇಗೌಡರಿಗೆ ‘ಕೆವಿಜಿ ಎಕ್ಸಲೆನ್ಸ್ ಅವಾರ್ಡ್ಸ್’
ಸುಳ್ಯ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ರಾಮನಗರ ಸಮೀಪದ ಜಾನಪದ ಲೋಕದ ರೂವಾರಿ ಡಾ। ಎಚ್.ಎಲ್. ನಾಗೇಗೌಡ ಅವರು 2001 ನೇ ಇಸವಿಯ ಕೆವಿಜಿ ಎಕ್ಸಲೆನ್ಸ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಡಿಸೆಂಬರ್ 26 ರ ಬುಧವಾರ ಸುಳ್ಯದ ಕೆ.ವಿ.ಜೆ. ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ವಿದ್ಯಾಸಂಸ್ಥೆಯ ಸ್ಥಾಪಕಾಧ್ಯಕ್ಷ ಕುರುಂಜಿ ವೆಂಕಟ್ರಮಣ ಗೌಡ ಪ್ರಶಸ್ತಿ ಪ್ರದಾನ ಮಾಡುವರು ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ। ರೇಣುಕಾಪ್ರಸಾದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೇಂದ್ರ ಜವಳಿ ಖಾತೆ ಸಚಿವ ವಿ.ಧನಂಜಯಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸಂಸದ ಅಂಬರೀಷ್ ಅತಿಥಿಯಾಗಿ ಆಗಮಿಸುವರು ಎಂದು ರೇಣುಕಾಪ್ರಸಾದ್ ಹೇಳಿದರು. ಕೆ.ವಿ.ಜಿ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿದ ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಳೆದ ವರ್ಷದಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications