ಪ್ರೊ. ಗಲಗಲಿ ‘ಈ ನೆಲದ ಹೆಮ್ಮೆಯ ಪುತ್ರ’
ಬೆಂಗಳೂರು : 2001ನೇ ಸಾಲಿನ ‘ಈ ನೆಲದ ಹೆಮ್ಮೆಯ ಪುತ್ರ’ ಪ್ರಶಸ್ತಿಗೆ ಪ್ರೊ. ಆರ್.ಜೆ. ಗಲಗಲಿ ಪಾತ್ರರಾಗಿದ್ದಾರೆ. ‘ಅಖಿತ ಭಾರತ ಪ್ರಜ್ಞಾವಂತರ ಪರಿಷತ್’ ಪ್ರತಿವರ್ಷ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.
ಪರಿಷತ್ ನೀಡುವ ಈ ರಾಷ್ಟ್ರಮಟ್ಟದ ಪ್ರಶಸ್ತಿಗೆ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹಾಗೂ ಪ್ರೊ. ಗಲಗಲಿ ಸೇರಿದಂತೆ ಒಟ್ಟು ಏಳು ಮಂದಿಯನ್ನು ಆಯ್ಕೆ ಮಾಡಲಾಗಿದೆ.
ರಾಷ್ಟ್ರೀಯತೆ, ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ನಿಟ್ಟಿನಲ್ಲಿ ಶ್ರಮಿಸಿದ ವಿವಿಧ ಕ್ಷೇತ್ರಗಳ ಗಣ್ಯರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ಡಿಸೆಂಬರ್ 31ರಂದು ಅಹ್ಮದಾಬಾದ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಖಿಲ ಭಾರತ ಪ್ರಜ್ಞಾವಂತರ ಪರಿಷತ್ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಜಿಲ್ಲೆಯ ಪಾರಿಶ್ವಾಡ್‌ನಲ್ಲಿ ಜನಿಸಿ, ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗ ಮಾಡಿ, ಅದೇ ವಿಶ್ವ ವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ ಗಲಗಲಿ ಅವರು, ಉತ್ತರ ಪ್ರದೇಶ ಸರಕಾರದ ಉನ್ನತ ಶಿಕ್ಷಣ ಸೇವಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
(ಇನ್‌ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications