ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

70 ಕೋಟಿ ರು. ವೆಚ್ಚದಲ್ಲಿ ದಾವಣಗೆರೆ ನಗರಕ್ಕೆ ಒಳಚರಂಡಿ ವ್ಯವಸ್ಥೆ

By Staff
|
Google Oneindia Kannada News

ದಾವಣಗೆರೆ : ದಾವಣಗೆರೆ ನಗರಕ್ಕೆ 70 ಕೋಟಿ ರುಪಾಯಿ ವೆಚ್ಚದಲ್ಲಿ ಸಮರ್ಪಕವಾದ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. ಈ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದೂ ಅವರು ಹೇಳಿದರು.

ನಗರದ ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯವರ್ಧನೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸುವ್ಯವಸ್ಥಿತ ಒಳಚರಂಡಿ ನಿರ್ಮಿಸಲು ಉದ್ದೇಶಿಸಲಾಗಿದೆ. ದೀರ್ಘಕಾಲದ ಸಮಸ್ಯೆಯಾದ ಅಶೋಕ ರಸ್ತೆಯ ರೈಲ್ವೆ ಗೇಟ್‌ ಸಮಸ್ಯೆ ಪರಿಹರಿಸಲು 6 ಕೋಟಿ ರುಪಾಯಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಲೂ ಉದ್ದೇಶಿಸಲಾಗಿದೆ. ಮೇಲ್ಸೇತುವೆ ನಿರ್ಮಾಣ ಸಂಬಂಧ ಸಮೀಕ್ಷೇ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.

ದಾವಣಗೆರೆ ಜಿಲ್ಲೆಗೆ 700 ಶಾಲಾ ಕೊಠಡಿಗಳ ಅಗತ್ಯ ಇದೆ. ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ 300 ಶಾಲಾ ಕೊಠಡಿ ನಿರ್ಮಾಣ ಕೈಗೊಳ್ಳಲಾಗುವುದು ಎಂದು ಅವರು, ಆಶ್ರಯ ಯೋಜನೆಯಡಿ ಹಾಗೂ ಅಂಬೇಡ್ಕರ್‌ ವಸತಿ ಯೋಜನೆಯಡಿ ಒಟ್ಟು 6 ಸಾವಿರ ಮನೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ರಂಗ ಸಮಾಗಮ: ಡಿ.29ರ ಶನಿವಾರದಿಂದ ಎರಡು ದಿನಗಳ ಕಾಲ ಇಲ್ಲಿ ರಂಗ ಸಮಾಗಮ ಎಂಬ ರಾಜ್ಯಮಟ್ಟದ ಕಾರ್ಯಕ್ರಮ ಜರುಗಲಿದೆ. ಈ ಸಮಾವೇಶದಲ್ಲಿ ಹವ್ಯಾಸಿ ಮತ್ತು ವೃತ್ತಿ ರಂಗಭೂಮಿಯ ಬಗ್ಗೆ ವಿಚಾರ ಸಂಕಿರಣ, ಸಂವಾದ ಹಾಗೂ ತಿಂಗಳ ಬೆಳಕಲ್ಲಿ ರಂಗದ ಮೆರುಗು ಕಾರ್ಯಕ್ರಮ ಜರುಗಲಿದೆ. ಈ ವಿಷಯವನ್ನು ನಾಟಕ ಅಕಾಡಮಿ ಅಧ್ಯಕ, ಆರ್‌. ನಾಗೇಶ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

(ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X