ಕೇಂದ್ರದಿಂದ ಸಾರ್ವಜನಿಕ ವಲಯಗಳ ಲೂಟಿ- ಮನಮೋಹನ್ ಸಿಂಗ್
ಬೆಂಗಳೂರು : ಬಂಡವಾಳ ಹಿಂತೆಗೆತದ ಹೆಸರಿನಲ್ಲಿ ಸಾರ್ವಜನಿಕ ವಲಯಗಳನ್ನು ಕೇಂದ್ರದಲ್ಲಿನ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟದ ಸರ್ಕಾರ ದೋಚುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ವಿತ್ತ ಸಚಿವ ಮನಮೋಹನ್ ಸಿಂಗ್ ಟೀಕಿಸಿದ್ದಾರೆ.
ಸಾರ್ವಜನಿಕ ವಲಯಗಳಿಂದ ಬಂಡವಾಳ ವಾಪಸ್ಸಾತಿ ಕುರಿತು ಸರ್ಕಾರ ನಿರ್ದಿಷ್ಟ ನಿಲುವನ್ನು ಹೊಂದಿಲ್ಲ . ಸರ್ಕಾರ ಸಾಗುತ್ತಿರುವ ದಾರಿ ಸರಿಯಾಗಿಲ್ಲ . ಹಣದ ಕೊರತೆಯನ್ನು ಎದುರಿಸುತ್ತಿರುವ ಸರ್ಕಾರ ಸಾರ್ವಜನಿಕ ವಲಯಗಳನ್ನು ದೋಚುತ್ತಿದೆ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭೆಯ ಪ್ರತಿಪಕ್ಷಗಳ ನಾಯಕ ಮನಮೋಹನ್ ಸಿಂಗ್ ತಿಳಿಸಿದರು.
ಸಣ್ಣ ಉಳಿತಾಯದ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿರುವ ಸರ್ಕಾರದ ನಿರ್ಧಾರದ ಕುರಿತು ಪ್ರಶ್ನೆಯಾಂದಕ್ಕೆ ಉತ್ತರಿಸಿದ ಅವರು, ಸರ್ಕಾರದ ಇತ್ತೀಚಿನ ನಡಾವಳಿಗಳು ಆರ್ಥಿಕತೆಗೆ ಧಕ್ಕೆ ಉಂಟುಮಾಡುತ್ತವೆ ಎಂದು ಅಭಿಪ್ರಾಯಪಟ್ಟರು. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆರ್ಥಿಕ ಬೆಳವಣಿಗೆಯ ದರ ಶೇ. 5ಕ್ಕಿಂಥ ಕಡಿಮೆ ಇರುತ್ತದೆಂದು ತಾವು ನಿರೀಕ್ಷಿಸಿರುವುದಾಗಿ ಅವರು ಹೇಳಿದರು.
ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ವಿತ್ತ ಸಚಿವ ಯಶವಂತ ಸಿನ್ಹಾ ಅವರು ನೀಡಿರುವ ಹೇಳಿಕೆಯನ್ನು ಪ್ರಸ್ತಾಪಿಸಿದ ಮನಮೋಹನ್ ಸಿಂಗ್, ಈ ಹೇಳಿಕೆ ಗಂಭೀರ ವಿಶ್ಲೇಷಣೆಯಿಂದ ಕೂಡಿದೆ ಎಂದು ನನಗನಿಸುವುದಿಲ್ಲ . ಆದರೆ, ಸಿನ್ಹಾ ಅವರ ಹೇಳಿಕೆ ನಿಜವಾಗಲಿ ಎಂದು ಹಾರೈಸುವುದಾಗಿ ಹೇಳಿದರು.
ಅರ್ಜೆಂಟೈನಾ ತಲುಪಿರುವ ಆರ್ಥಿಕ ದುಸ್ಥಿತಿಯನ್ನು ಭಾರತ ಕೂಡ ತಲುಪುವುದೇ ಎನ್ನುವ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸದ ಮನಮೋಹನ್ ಸಿಂಗ್- ಆರ್ಥಿಕ ಪರಿಸ್ಥಿತಿ ಉದ್ದೇಶಪೂರ್ವಕವಾಗಿ ತಪ್ಪು ನಿರ್ವಹಣೆಯಾದರೆ, ಅಂಥ ಆರ್ಥಿಕತೆಯನ್ನು ಯಾವ ಕಾನೂನು ಕೂಡ ರಕ್ಷಿಸಲಾರದು ಎಂದು ಮಾರ್ಮಿಕವಾಗಿ ಹೇಳಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications