ಅಪಘಾತ:ಯಲ್ಲಮ್ಮನ ದರ್ಶನ ಮಾಡಿ ವಾಪಸಾಗುತ್ತಿದ್ದ ನಾಲ್ವರ ಸಾವು
ಹಾವೇರಿ: ಇಲ್ಲಿನ ಕಾಕೋಳ ಗ್ರಾಮದ ಬಳಿ ಸಂಭವಿಸಿದ ರಸ್ತೆ ದುರಂತದಲ್ಲಿ ಇಬ್ಬರು ಯಾತ್ರಿಕರು ಮೃತಪಟ್ಟಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ 12.45ರ ಹೊತ್ತಿಗೆ ಈ ದುರಂತ ಘಟಿಸಿದೆ. ಸವದತ್ತಿಯ ಯಲ್ಲಮ್ಮ ದುರ್ಗ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ಟೆಂಪೋದಲ್ಲಿ 13 ಮಂದಿ ಯಾತ್ರಿಕರು ಪ್ರಯಾಣಿಸುತ್ತಿದ್ದರು. ಟೆಂಪೋ ರಸ್ತೆಯಲ್ಲಿ ಸ್ಕಿಡ್ ಆಗಿ ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಾಯಗೊಂಡಿರುವ ಪ್ರಯಾಣಿಕರನ್ನು ದಾವಣಗೆರೆಯ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications