ಕುವೆಂಪು ಸಾಹಿತ್ಯದ ವೆಬ್‌ಸೈಟ್‌ಗೆ ನೆರವಾಗಲು ಸರಕಾರ ಸಿದ್ಧ
ಮೈಸೂರು : ರಾಷ್ಟ್ರಕವಿ ಕುವೆಂಪು ಅವರ ಸಮಗ್ರ ಸಾಹಿತ್ಯವನ್ನೊಳಗೊಂಡ ವೆಬ್‌ಸೈಟ್ ನಿರ್ಮಾಣಕ್ಕೆ ಸರಕಾರ ಎಲ್ಲ ನೆರವು ನೀಡಲು ಬದ್ಧವಾಗಿದೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ.
ಅವರು ಭಾನುವಾರ ನಗರದ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾವರ್ಧಕ ಸಂಘ ಆಯೋಜಿಸಿದ್ದ ಕುವೆಂಪು ಅವರ 98ನೇ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಹಂಪಿ ಕನ್ನಡ ವಿಶ್ವ ವಿದ್ಯಾಲಯ ಈ ನಿಟ್ಟಿನಲ್ಲಿ ಈಗಾಗಲೇ ಯೋಜನೆಗಳನ್ನು ಹಮ್ಮಿಕೊಂಡಿದೆ. ಕುವೆಂಪು ಅವರ ಸಾಹಿತ್ಯವನ್ನು ಜಗತ್ತಿನಾದ್ಯಂತ ಪರಿಚಯಿಸುವ ದೃಷ್ಟಿಯಿಂದ ಸರಕಾರ ಈ ವೆಬ್‌ಸೈಟ್ ನಿರ್ಮಾಣಕ್ಕೆ ಮುಂದಾಗಿದೆ ಎಂದು ಪಾಟೀಲ್ ಹೇಳಿದರು.
ಕುವೆಂಪು ಅವರ ಶಾಂತಿ ಸಂದೇಶಗಳನ್ನು ಪಾಲಿಸಿದರೆ ಸಮಾಜದಲ್ಲಿ ಶಾಸನ, ನ್ಯಾಯಾಲಯ, ಪೊಲೀಸರ ಅಗತ್ಯವೇ ಇರುವುದಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಕರ್ನಾಟಕ ಪತ್ರಿಕಾ ಅಕಾಡೆಮಿ ಅಧ್ಯಕ್ಷ ಎನ್. ಅರ್ಜುನ್ ದೇವ ಅವರಿಗೆ ವೀರಣ್ಣ ಗೌಡ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications