ಜನವರಿ 18ರಂದು ಉಡುಪಿಯಲ್ಲಿ ಪರ್ಯಾಯೋತ್ಸವ
ಉಡುಪಿ : ಜನವರಿ 18ರ ಶುಕ್ರವಾರ ಉಡುಪಿಯಲ್ಲಿ ಪರ್ಯಾಯೋತ್ಸವ. ಪೇಜಾವರ ಮಠದಿಂದ ಪಲಿಮಾರು ಮಠಕ್ಕೆ ಪೀಠದ ಸಮರ್ಪಣೆ. ಅಂದು ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ಸ್ವಾಮೀಜಿ ಅವರು ಪೀಠಾರೋಹಣ ಮಾಡಲಿದ್ದಾರೆ.
ಪೀಠಾರೋಹಣದ ಅಂಗವಾಗಿ ಜನವರಿ 4ರ ಶುಕ್ರವಾರ ವಿದ್ಯಾಧೀಶ ಸ್ವಾಮೀಜಿ ಅವರು ಪುರಪ್ರವೇಶ ಮಾಡಲಿದ್ದಾರೆ. ಪುರಪ್ರವೇಶಿಸುವ ಸ್ವಾಮೀಜಿ ಅವರನ್ನು ಸತ್ಕರಿಸಲು ಅಂದು ಸಂಜೆ 7 ಗಂಟೆಗೆ ಉಡುಪಿಯಲ್ಲಿ ಪೌರ ಸನ್ಮಾನವನ್ನೂ ಏರ್ಪಡಿಸಲಾಗಿದೆ.
ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬನ್ನಂಜೆ ಗೋವಿಂದಾಚಾರ್ಯ ಮತ್ತು ತಿರುಮಲ ತಿರುಪತಿ ದೇವಸ್ಥಾನದ ದಾಸ ಸಾಹಿತ್ಯ ಯೋಜನೆ ವಿಶೇಷಾಧಿಕಾರಿ ಅಪ್ಪಣ್ಣಾಚಾರ್ಯ ಅಭಿನಂದನಾ ಭಾಷಣ ಮಾಡಲಿದ್ದಾರೆ. ಪೇಜಾವರ ಮಠದ ಕಿರಿಯ ಪಟ್ಟದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ಸ್ವಾಮೀಜಿ ಅನುಗ್ರಹ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...