ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ರಿಕೆಟ್‌ ಕಲೆಗಾರ ದ್ರಾವಿಡ್‌ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

By Staff
|
Google Oneindia Kannada News

ಬೆಂಗಳೂರು : ಕ್ರಿಕೆಟ್‌ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಗಾಗಿ ಕ್ರಿಕೆಟ್‌ ಕಲೆಗಾರ ರಾಹುಲ್‌ ದ್ರಾವಿಡ್‌ ಅವರಿಗೆ ಶುಕ್ರವಾರ ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಲಾಯಿತು.

ರಾಹುಲ್‌ ದ್ರಾವಿಡ್‌ ದಕ್ಷಿಣ ಆಫ್ರಿಕ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ನವೆಂಬರ್‌ 1ರಂದು ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದರಿಂದ, ಆ ಸಮಾರಂಭದಲ್ಲಿ ಅವರು ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ಕಾರಣಕ್ಕೆ ಶುಕ್ರವಾರ ವಿಧಾನಸೌಧದಲ್ಲಿ ಸರಳ ಸಮಾರಂಭ ನಡೆಸಿ, ಅಲ್ಲಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯ ಕ್ರಿಕೆಟ್‌ ಸಂಸ್ಥೆಯ ಕಾರ್ಯದರ್ಶಿ ಬ್ರಿಜೇಶ್‌ ಪಟೇಲ್‌, ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್‌ ಸಮಾರಂಭದಲ್ಲಿ ಭಾಗವಹಿಸಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X