ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪರಾಧ ನಿಯಂತ್ರಣದತ್ತ ರಾಜ್ಯ, ತಕ್ಷಣದಿಂದಲೇ ಕೋಕಾ ಜಾರಿ

By Staff
|
Google Oneindia Kannada News

ಬೆಂಗಳೂರು : ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ‘ಕೋಕಾ’ವನ್ನು ಯಾವುದೇ ಬದಲಾವಣೆಗಳಿಲ್ಲದೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಮಹಾರಾಷ್ಟ್ರದಲ್ಲಿ ಅನೇಕ ವರ್ಷಗಳಿಂದ ಅಸ್ತಿತ್ವದಲ್ಲಿರುವ ಕಾಯ್ದೆಯನ್ನು ಮಾದರಿಯಾಗಿಟ್ಟುಕೊಂಡು ಕೋಕಾವನ್ನು ರೂಪಿಸಲಾಗಿದ್ದು, ವ್ಯವಸ್ಥಿತ ಅಪರಾಧಿಗಳ ಕೂಟ ಅಥವಾ ಸಂಘಟನೆಗಳು ನಡೆಸುವ ಅಪರಾಧ ಚಟುವಡಿಕೆಯನ್ನು ಮಟ್ಟ ಹಾಕಲು ಈ ಕಾಯ್ದೆ ನೆರವಾಗಲಿದೆ. ಡಿಸೆಂಬರ್‌ 28ರಂದು ರಾಷ್ಟ್ರಪತಿ ಕೆ. ಆರ್‌. ನಾರಾಯಣನ್‌ ಈ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಒಪ್ಪಿಗೆ ಸೂಚಿಸಿದ್ದಾರೆ. ಜನವರಿ ಎರಡರಿಂದ ಅನ್ವಯವಾಗುವಂತೆ ಈ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ.

ಈ ಕಾಯ್ದೆಯ ಪ್ರಕಾರ

  • ಆರೋಪಿಯ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ. ಅಪರಾಧಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿಗೆ ಕಡಿಮೆ ಇಲ್ಲದಂತೆ ದಂಡ ವಿಧಿಸುವ ಅವಕಾಶವಿದೆ.
  • ಅಪರಾಧ ಕಾರ್ಯಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಚೋದನೆ ನೀಡುವ ವ್ಯಕ್ತಿಗಳನ್ನು ಅಪರಾಧಿಗಳೆಂದೇ ಪರಿಗಣಿಸಲಾಗುವುದು.
  • ಕೋಕಾ ಕಾಯ್ದೆಯಡಿ ದಾಖಲಿಸಿಕೊಂಡ ಅಪರಾಧ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಧೀಶರನ್ನು ನೇಮಿಸುವ ಹೊಣೆ ಹೈಕೋರ್ಟ್‌ ಮುಖ್ಯನ್ಯಾಯಾಧೀಶರದು.
  • ಸಂಘಟಿತ ಅಪರಾಧಿಗಳು ಬಳಸುವ ಪೇಜರ್‌, ವಯರ್‌ಲೆಸ್‌, ಫೋನ್‌ ಕರೆಗಳನ್ನು ಎಸ್ಪಿಗಿಂತ ಮೇಲ್ದರ್ಜೆಯ ಅಧಿಕಾರಿಗಳು ಕದ್ದು ಕೇಳಲು ಈ ಕಾಯ್ದೆಯಲ್ಲಿ ಅವಕಾಶವಿದೆ.
  • ಎಸ್ಪಿ ಗಿಂತ ಮೇಲಿನ ಹುದ್ದೆಯಲ್ಲಿರುವ ಅಧಿಕಾರಿಗಳ ಮುಂದೆ ವಿಚಾರಣೆ ಸಂದರ್ಭದಲ್ಲಿ ನೀಡಿದ ಹೇಳಿಕೆಗಳು ನ್ಯಾಯಾಲಯದಲ್ಲಿ ಸಾಕ್ಷ್ಯವಾಗಿ ಪರಿಗಣಿಸಲ್ಪಡುತ್ತವೆ. ವಿಶೇಷ ನ್ಯಾಯಾಲಯ ಸಾಕ್ಷಿದಾರನ ಬಗ್ಗೆ ರಹಸ್ಯ ಕಾಪಾಡುತ್ತದೆ.
  • ಅಪರಾಧಿಗಳ ಸ್ಥಿರ ಮತ್ತು ಚರಾಸ್ತಿಯನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬಹುದು.
  • ಕೋಕಾ ಕಾಯ್ದೆಯಡಿ ಬರುವ ಪ್ರಕರಣವನ್ನು ಪೊಲೀಸ್‌ ಉಪ ಮಹಾ ನಿರೀಕ್ಷಕ ಅವರಿಗಿಂತ ಕಡಿಮೆ ದರ್ಜೆಯ ಅಧಿಕಾರಿಗಳು, ಹಿರಿಯ ಅಧಿಕಾರಿಗಳ ಅನುಮೋದನೆ ಇಲ್ಲದೆ ದಾಖಲು ಮಾಡಿಕೊಳ್ಳುವಂತಿಲ್ಲ.
  • ವಿಶೇಷ ನ್ಯಾಯಾಲಯವು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕರಿಗಿಂತ ಕೆಳ ದರ್ಜೆಯ ಅಧಿಕಾರಿಯ ಸಮ್ಮುಖದಲ್ಲಿ ವಿಚಾರಣೆ ನಡೆಸುವಂತಿಲ್ಲ. ಅಲ್ಲದೆ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾದ ಅಧಿಕಾರಿಗಳಿಗೆ 3 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು.
(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X