• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಂಗೇರಿದ ಕನಕಪುರ : ದೇವೇಗೌಡ, ಶಿವಕುಮಾರ್‌ ನಾಮಪತ್ರ ಸಲ್ಲಿಕೆ

By Staff
|

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಸಂಪುಟದ ಪ್ರಭಾವಿ ಮಂತ್ರಿಗಳಲ್ಲೊಬ್ಬರಾದ ಸಹಕಾರ ಸಚಿವ ಡಿ.ಕೆ.ಶಿವಕುಮಾರ್‌ ಶನಿವಾರ ಬೆಳಗ್ಗೆ ನಾಮಪತ್ರ ಸಲ್ಲಿಸುವುದರೊಂದಿಗೆ ಕನಕಪುರ ಲೋಕಸಭಾ ಚುನಾವಣೆ ಆಖಾಡ ಸಿದ್ಧವಾರಿದೆ.

ಕೆಪಿಸಿಸಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ , ಉನ್ನತ ಶಿಕ್ಷಣ ಸಚಿವ ಡಾ.ಜಿ.ಪರಮೇಶ್ವರ್‌ ಹಾಗೂ ಇತರ ಸಚಿವರು ಮತ್ತು ನೂರಾರು ಅಭಿಮಾನಿಗಳೊಂದಿಗೆ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಸಹಕಾರ ಸಚಿವ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಬಿಜೆಪಿಯೇ ನೇರ ಎದುರಾಳಿ

ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಭಾರತೀಯ ಜನತಾ ಪಕ್ಷ ನೇರ ಎದುರಾಳಿಯಾಗಿದೆ ಎಂದು ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್‌ ಹೇಳಿದರು. ತಮ್ಮ ಗೆಲುವು ನಿಶ್ಚಯ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದ ಅವರು, ಇತರ ಪಕ್ಷ ಹಾಗೂ ವ್ಯಕ್ತಿಗಳಿಗಿಂತ ಕಾಂಗ್ರೆಸ್‌ ಬಲಿಷ್ಠವಾದುದು ಎಂದರು.

ಶಿವಕುಮಾರ್‌ ಬೆನ್ನಿಗೇ ಗೌಡರ ನಾಮಪತ್ರ

ಸಂಯುಕ್ತ ಜನತಾದಳದ ಬೆಂಬಲವನ್ನು ಪಡೆದಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ನೂರಾರು ಬೆಂಬಲಿಗರ ಜಯಕಾರದ ನಡುವೆ ಶನಿವಾರ ನಾಮಪತ್ರ ಸಲ್ಲಿಸಿದರು. ಸಹಕಾರ ಸಚಿವ ಡಿ.ಕೆ.ಶಿವಕುಮಾರ್‌ ನಾಮಪತ್ರ ಸಲ್ಲಿಸಿದ ಸ್ವಲ್ಪ ಸಮಯದಲ್ಲೇ ಬೆಂಬಲಿಗರೊಂದಿಗೆ ಆಗಮಿಸಿದ ಗೌಡರು ನಾಮಪತ್ರ ಸಲ್ಲಿಸಿದ್ದು ವಿಶೇಷ.

ಗೌಡರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಸಿದ್ಧರಾಮಯ್ಯ ಹಾಗೂ ಸಂಯುಕ್ತ ಜನತಾದಳದ ರಾಜ್ಯಾಧ್ಯಾಕ್ಷ ಭೈರೇಗೌಡ ಮತ್ತು ಪಿಜಿಆರ್‌ ಸಿಂಧ್ಯಾ ಹಾಜರಿದ್ದರು.

ನಾಮಪತ್ರ ಸಲ್ಲಿಸುವ ಮುನ್ನಾದಿನವಾದ ಶುಕ್ರವಾರ ಶೃಂಗೇರಿಗೆ ತೆರಳಿದ್ದ ದೇವೇಗೌಡರು, ಶೃಂಗೇರಿ ಶಾರದಾಂಬೆಗೆ ಪೂಜೆ ಸಲ್ಲಿಸಿ ದೇಗುಲದಲ್ಲಿ ಹಮ್ಮಿಕೊಂಡಿದ್ದ ಚಂಡಿಕಾ ಹೋಮದಲ್ಲಿ ಭಾಗವಹಿಸಿದ್ದರು. ಶೃಂಗೇರಿಯ ಶ್ರೀ ಭಾರತೀ ತೀರ್ಥರನ್ನು ಭೇಟಿ ಮಾಡಿದ ಮಾಜಿ ಪ್ರಧಾನಿಗಳು ಶ್ರೀಗಳ ಆಶೀರ್ವಚನ ಪಡೆದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more