ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮಖಂಡಿ ಬಳಿ ಟ್ರಾಕ್ಟರ್‌ಗೆ ಬೆಂಕಿ : 3 ಮಹಿಳೆಯರ ಸಜೀವ ದಹನ

By Staff
|
Google Oneindia Kannada News

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿ ಶನಿವಾರ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಮೂವರು ಮಹಿಳೆಯರು ಸಜೀವವಾಗಿ ಸುಟ್ಟು ಹೋಗಿದ್ದು, ಇತರ 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಎಲ್ಲರೂ ಟ್ರಾಕ್ಟರ್‌ ಒಂದರಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಾಕ್ಟರ್‌ಗೆ ಬೆಂಕಿ ತಗುಲಿತು, ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲಿ ತನ್ನ ಕೆನ್ನಾಲಿಗೆ ಚಾಚಿ, ಮೂವರು ಮಹಿಳೆಯರನ್ನು ಸಜೀವವಾಗಿ ದಹಿಸಿತು, ಏಳು ಮಂದಿ ತೀವ್ರವಾಗಿ ಗಾಯಗೊಂಡರು ಎಂದು ಪೊಲೀಸರು ಹೇಳಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.

ಅಪಘಾತದಲ್ಲಿ ಸಾವನ್ನಪ್ಪಿದ ಮತ್ತು ಗಾಯಗೊಂಡ ಎಲ್ಲರೂ ತೋಟದ ಕೂಲಿ ಕಾರ್ಮಿಕರು. ಅಗ್ನಿಶಾಮಕ ಪಡೆಗಳು ಬೆಂಕಿಯನ್ನು ನಂದಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಆಕಸ್ಮಿಕದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

(ಪಿ.ಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X