ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾವೇರಿ: ಪೊಲೀಸ್‌ ವ್ಯಾನ್‌ ಲಾರಿ ಡಿಕ್ಕಿ,ಐವರು ಪೊಲೀಸರ ದುರ್ಮರಣ

By Staff
|
Google Oneindia Kannada News

ಬೆಂಗಳೂರು: ಹಾವೇರಿ ಬಳಿ ಮಂಗಳವಾರ (ಜ.22) ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್‌ ಪೇದೆಗಳು ಮೃತರಾಗಿದ್ದು , ಇತರ ಮೂವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ.

10 ಮಂದಿ ಪೊಲೀಸ್‌ ಕಾನ್ಸ್‌ಟೇಬಲ್‌ಗಳನ್ನು ಹೊತ್ತು ತರುತ್ತಿದ್ದ ವ್ಯಾನ್‌ ಹಾಗೂ ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಈ ಅಪಘಾತ ಸಂಭವಿಸಿದೆ. ಶಸ್ತ್ರ ಸಜ್ಜಿತ ಇಬ್ಬರು ಪೊಲೀಸ್‌ ಪೇದೆಗಳು ಹಾಗೂ ಇಬ್ಬರು ಮುಖ್ಯ ಪೊಲೀಸ್‌ ಪೇದೆಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಸಹಾಯಕ ಪೊಲೀಸ್‌ ಪೇದೆ ಹಾವೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಬಾಗಲಕೋಟೆಯಲ್ಲಿ ಬಂದೋಬಸ್ತ್‌ಗಾಗಿ ನಿಯೋಜಿಸಿದ್ದ ಈ ಪೊಲೀಸರು ಕರ್ತವ್ಯ ಮುಗಿಸಿಕೊಂಡು ಹಿಂತಿರುಗುವಾಗ ಈ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರು ಪೇದೆಗಳನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಇಬ್ಬರು ಪೇದೆಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X