ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ವೈದ್ಯಕೀಯ ಇಲಾಖೆಗೆ ಸಿಬ್ಬಂದಿ ಕೊರತೆ : ವಿಶೇಷ ನೇಮಕಾತಿ ನೀತಿ ಜಾರಿ?
ಬೆಂಗಳೂರು : ರಾಜ್ಯ ಆರೋಗ್ಯ ಇಲಾಖೆ ವೈದ್ಯಕೀಯ ಸಿಬ್ಬಂದಿಯ ಕೊರತೆಯನ್ನು ಎದುರಿಸುತ್ತಿದ್ದು , ಇಲಾಖೆಯಲ್ಲಿನ 6 ಸಾವಿರ ಹುದ್ದೆಗಳನ್ನು ತುಂಬಲು ವಿಶೇಷ ನೇಮಕಾತಿ ನೀತಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ.
ಮುಂಬರುವ ಸಂಪುಟ ಸಭೆಯಲ್ಲಿ ಆರೋಗ್ಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ನೇಮಕಾತಿ ನೀತಿಯನ್ನು ಜಾರಿಗೊಳಿಸುವ ಕುರಿತು ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಎ.ಬಿ.ಮಲಕರೆಡ್ಡಿ ಬುಧವಾರ ವಿಧಾನಸಭೆಯಲ್ಲಿ ತಿಳಿಸಿದರು. ಬಿಜೆಪಿಯ ಡಿ.ವಿ.ಸದಾನಂದಗೌಡ ಅವರ ಪ್ರಶ್ನೆಗೆ ಪ್ರಶ್ನೋತ್ತರ ಅವಧಿಯಲ್ಲಿ ಸಚಿವರು ಉತ್ತರಿಸುತ್ತಿದ್ದರು.
ರಾಜ್ಯದಲ್ಲಿ 573 ವೈದ್ಯರ ಹುದ್ದೆ ಹಾಗೂ 14 ಸಾವಿರದ 870 ಪ್ಯಾರಾ ಮೆಡಿಕಲ್ ಸಿಬ್ಬಂದಿಯ ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳನ್ನು ತುಂಬಲಾಗುವುದು ಎಂದು ಮಲಕರೆಡ್ಡಿ ಹೇಳಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Wednesday, January 23, 2002, 5:30 [IST]