ಬಳ್ಳಾರಿಯಿಂದ ಬೆಂಗಳೂರುವರೆಗೆ.. ಪೊಲೀಸ್‌ ರಕ್ಷೆಯಡಿ ಹಾರಿದ ಬಾವುಟ

ಬೆಂಗಳೂರು : ಹುಬ್ಬಳ್ಳಿ-ಧಾರವಾಡ, ಬಳ್ಳಾರಿ, ಮೈಸೂರು, ತುಮಕೂರು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ನಡುವೆ 53 ನೇ ಗಣರಾಜ್ಯೋತ್ಸವ ಆಚರಣೆ ವಿಜೃಂಭಣೆಯಿಂದ ನಡೆದಿದೆ.

ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಆಕರ್ಷಕ ಪಥ ಸಂಚಲನೆ ವೀಕ್ಷಿಸಿದ ರಾಜ್ಯಪಾಲರಾದ ವಿ.ಎಸ್‌. ರಮಾದೇವಿ, ಹೆಚ್ಚುತ್ತಿರುವ ಜನಸಂಖ್ಯೆ, ಭ್ರಷ್ಟಾಚಾರ, ಹಿಂಸೆ ಹಾಗೂ ಭಯೋತ್ಪಾದಕತೆ ಕುರಿತು ಆತಂಕ ವ್ಯಕ್ತಪಡಿಸಿದರು. ಫೀಲ್ಡ್‌ ಮಾರ್ಷಲ್‌ ಮಾಣಿಕ್‌ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣೆ ನಡೆಸಿದ ನಂತರ ಅವರು ಮಾತನಾಡುತ್ತಿದ್ದರು.

ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಉದ್ಯೋಗ, ಆಹಾರ, ವಸತಿ ಸಮಸ್ಯೆಗಳು ಉಂಟಾಗುತ್ತಿವೆ. ದೇಶದ ಪ್ರಗತಿಗಾಗಿ ಜನಸಂಖ್ಯೆ ಏರುಮುಖಕ್ಕೆ ಕಡಿವಾಣ ಹಾಕಬೇಕಿದೆ. ಬಡತನ ಹಾಗೂ ಅನಕ್ಷರತೆಯನ್ನು ಅಳಿಸುವ ಮೂಲಕ ದೇಶವನ್ನು ಪ್ರಗತಿ ಪಥದತ್ತ ಕರೆದೊಯ್ಯಬೇಕು ಎಂದು ರಮಾದೇವಿ ಹೇಳಿದರು.

ಸಾಫ್ಟ್‌ವೇರ್‌ ತಂತ್ರಜ್ಞಾನದಲ್ಲಿ ಮುಂದಿರುವ ಕರ್ನಾಟಕ ಇದೀಗ ಜೈವಿಕ ತಂತ್ರಜ್ಞಾನ ಹಾಗೂ ಹಾರ್ಡ್‌ವೇರ್‌ ಪ್ರಗತಿಯತ್ತಲೂ ತನ್ನ ಗಮನ ಹರಿಸಿದೆ. ಮೂಲಭೂತ ಸೌಕರ್ಯಗಳು ಗ್ರಾಮೀಣ ಪ್ರದೇಶಗಳಿಗೂ ತಲುಪುವಂತಾಗಬೇಕು. ಇದರಿಂದಾಗಿ ನಗರಗಳಿಗೆ ಗ್ರಾಮೀಣರ ವಲಸೆಯೂ ತಪ್ಪುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಗಣರಾಜ್ಯೋತ್ಸವದ ಅಂಗವಾಗಿ ನಡೆದ ಆಕರ್ಷಕ ಪೆರೇಡ್‌ನಲ್ಲಿ ಗಡಿಭದ್ರತಾ ಪಡೆ, ರೈಲ್ವೆ ರಕ್ಷಣಾ ಪಡೆಗಳು, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌, ಅಗ್ನಿ ಶಾಮಕ ದಳದ ಸಿಬ್ಬಂದಿ, ಎನ್‌ಸಿಸಿ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು. ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಹೈಕೋರ್ಟ್‌, ವಿವಿಧ ಪಕ್ಷಗಳ ಕಚೇರಿಯಲ್ಲಿ ಆಚರಣೆ

ಹೈಕೋರ್ಟ್‌ ಅವರಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ನ್ಯಾಯಾಧೀಶ ಜೈನ್‌ ಅವರು ಧ್ವಜಾರೋಹಣ ನಡೆಸಿದರು. ವಕೀಲರ ಸಂಘವೂ ಗಣರಾಜ್ಯೋತ್ಸವವನ್ನು ಆಚರಿಸಿತು.

ಜಾತ್ಯತೀತ ಜನತಾದಳ : ಪಕ್ಷದ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಎಸ್‌.ಸಿದ್ಧರಾಮಯ್ಯ ಧ್ವಜಾರೋಹಣ ಮಾಡಿದರು. ದೇಶದಲ್ಲಿ ಬಡತನ ಹಾಗೂ ಅನಕ್ಷರತೆಯ ಪ್ರಮಾಣ ಹೆಚ್ಚಾಗಿದ್ದು, ಅವುಗಳನ್ನು ಅತ್ಯಂತ ಜರೂರಾಗಿ ತೊಡೆದುಹಾಕಬೇಕಿದೆ ಎಂದು ಸಿದ್ಧರಾಮಯ್ಯ ಹೇಳಿದರು.

ಸಂಯುಕ್ತ ಜನತಾದಳ: ಪಕ್ಷದ ರಾಜ್ಯಾಧ್ಯಕ್ಷ ಎಸ್‌.ಭೈರೇಗೌಡ ರಾಷ್ಟ್ರ ಧ್ವಜಾರೋಹಣ ಮಾಡಿದರು. ಇದೇ ಸಂದರ್ಭದಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕತೆಯ ಕುರಿತು ಅವರು ತೀವ್ರ ಕಳವಳ ವ್ಯಕ್ತಪಡಿಸಿದರು.

ಕಾಂಗ್ರೆಸ್‌ : ಪಕ್ಷದ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್‌ ಭಾಗವಹಿಸಿದ್ದರು.

ಬಳ್ಳಾರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ವೈ.ಘೋರ್ಪಡೆ ಧ್ವಜಾರೋಹಣ ಮಾಡಿದರು. ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್‌ ಕ್ಷಾಮವನ್ನು ಎದುರಿಸಲು ಸರ್ಕಾರ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅವರು ಹೇಳಿದರು.

ಗುಲ್ಬರ್ಗಾ : ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಾವಿನ ನೆರಳು

ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ನಡೆದರೂ, ಜಿಲ್ಲೆಯ ಸುರಪೂರ ತಾಲ್ಲೂಕಿನಲ್ಲಿ ಶನಿವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+