• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೈಸೂರಿನ ರೈತರ ರ್ಯಾಲಿಗೆ ದಾವಣಗೆರೆಯಿಂದ 2ಸಾವಿರ ಮಂದಿ ರೈತರು

By Staff
|

ದಾವಣಗೆರೆ : ಮೈಸೂರಿನಲ್ಲಿ ಜನವರಿ 30ರಂದು ನಡೆಯಲಿರುವ ರೈತರ ರ್ಯಾಲಿಯಲ್ಲಿ ಭಾಗವಹಿಸಲು ದಾವಣಗೆರೆಯ 2 ಸಾವಿರ ಮಂದಿ ರೈತರು ಸಿದ್ಧರಾಗಿದ್ದಾರೆ.

ಜನವರಿ 30ರ ಬೆಳಗ್ಗೆ ಮೈಸೂರಿಗೆ ಆಗಮಿಸಲಿರುವ ರೈತರು, ರಾಜ್ಯ ರೈತ ಸಂಘ ಆಯೋಜಿಸಿರುವ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಅರುಣ್‌ ಕುಮಾರ್‌ ಕುರಾಡಿ ತಿಳಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ರೈತರ ಸರಣಿ ಆತ್ಮಹತ್ಯೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಷಾದಿಸಿದರು.

ಇದೇ ಸಂದರ್ಭದಲ್ಲಿ ಅವರು, ತೊಗರಿ, ಶೇಂಗಾ ಮತ್ತು ಜೋಳದ ಬೆಳೆಯ ಮಾರಾಟ ಮತ್ತು ನಿರ್ವಹಣೆಗೆ ಪ್ರತ್ಯೇಕ ಮಂಡಳಿ ರಚನೆಯೂ ಉತ್ತರ ಕರ್ನಾಟಕದ ರೈತರ ಬಹುದಿನಗಳ ಬೇಡಿಕೆ ಎಂಬುದನ್ನು ಸರಕಾರ ಮರೆತಿದೆ. ರೈತರಿಗೆ ದಿನಕ್ಕೆ ಕನಿಷ್ಠ 14 ತಾಸುಗಳ ಕಾಲ ವಿದ್ಯುತ್‌ಪೂರೈಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

(ಇನ್ಫೋ ವಾರ್ತೆ)

ಸಮರಸತಾ ಸಂಗಮ...
ಮುಖಪುಟ / ಇವತ್ತು... ಈ ಹೊತ್ತು...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more